Tuesday, June 9, 2026
Homeಕರಾವಳಿಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಎನ್ಐಎ ಗೆ ಒಪ್ಪಿಸಿ: ಕೇಂದ್ರ ಗೃಹ ಸಚಿವ ಅಮಿತ್...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಎನ್ಐಎ ಗೆ ಒಪ್ಪಿಸಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಗೆ ಶೋಭಾ ಕರಂದ್ಲಾಜೆ ಪತ್ರ

- Advertisement -
- Advertisement -

ನವದೆಹಲಿ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಸಾವಿನ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ ತನಿಖೆಗೆ ಒಪ್ಪಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಹತ್ಯೆ ಪ್ರಕರಣವನ್ನು ಎನ್ ಐಎ ತನಿಖೆಗೆ ಒಪ್ಪಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ.

ಇಸ್ಲಾಮಿಕ್ ಮತಾಂಧ ಶಕ್ತಿಗಳು ಸಮಾಜದ ಶಾಂತಿ ಹಾಳು ಮಾಡುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವ ಶೋಭಾ ಕರಂದ್ಲಾಜೆ, ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಆಗ್ರಹಿಸಿದ್ದಾರೆ.‌

- Advertisement -

Latest News

error: Content is protected !!