ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಗೋಬಿ, ಕಬಾಬ್ ಮತ್ತು ಪಾನಿಪುರಿಗೆ ಪ್ರಿಯರಿಗೆ ಇವುಗಳ ತಯಾರಿಕೆಯಲ್ಲಿ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ ಎಂಬ ಶಾಕಿಂಗ್ ಸುದ್ದಿಯೊಂದನ್ನು ನೀಡಿತ್ತು. ಆದರೆ ಇದೀಗ ಮತ್ತೆ ಇಂತಹದ್ದೇ ಸುದ್ದಿಯೊಂದನ್ನು ಕೇಕ್ ಪ್ರಿಯರಿಗೆ ನೀಡುತ್ತಿದೆ.
ಕೇಕೆ ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ. ಈ ನಿಟ್ಟಿನಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಕೇಕೆ ಬಳಸುವ ಪದಾರ್ಥಗಳು ಕಲಬರಿಕೆಯಿಂದ ಕೂಡಿವೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿಯೇ ಕೇಕ್ ಮಾದರಿಗಳನ್ನು ಸಂಗ್ರಹಿಸಿ, ಪರಿಶೀಲನೆಗೆ ಒಳಪಡಿಸಿದ್ದಾರೆ.
ಈ ಪರಿಶೀಲನೆಯ ಸಂದರ್ಭದಲ್ಲಿ ಸಂಗ್ರಹಿಸಿದ್ದ 12 ಮಾದರಿ ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಇನ್ನು ವಿಶೇಷವಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್ ನಲ್ಲಿ ಅತೀ ಹೆಚ್ಚು ಬಣ್ಣ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.