Thursday, June 4, 2026
Homeತಾಜಾ ಸುದ್ದಿಜನರಿಗೆ ಭರ್ಜರಿ ಶಾಕ್ ಕೊಟ್ಟ ರಾಜ್ಯ ಸರ್ಕಾರ: ಆಸ್ತಿ ತೆರಿಗೆಯಲ್ಲಿ ಹೆಚ್ಚಳಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಜನರಿಗೆ ಭರ್ಜರಿ ಶಾಕ್ ಕೊಟ್ಟ ರಾಜ್ಯ ಸರ್ಕಾರ: ಆಸ್ತಿ ತೆರಿಗೆಯಲ್ಲಿ ಹೆಚ್ಚಳಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

- Advertisement -
- Advertisement -

ಬೆಂಗಳೂರು : ಹೊಸ ವರ್ಷದ  ಹೊಸ್ತಿಲಲ್ಲಿರುವ ರಾಜ್ಯದ ಜನರಿಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ.ಆಸ್ತಿ ತೆರಿಗೆಯಲ್ಲಿ ಶೇ.15ರಿಂದ ಶೇ.30ರಷ್ಟು ಹೆಚ್ಚಳ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಇಂತಹ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದ ಪಾಲಿಕೆ, ನಗರ, ಪುರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡುವಂತ ಮಸೂದೆಗೆ ಅಂಗೀಕಾರ ನೀಡಲಾಗಿದೆ.

ಈ ಮೂಲಕ ಆಸ್ತಿ ತೆರಿಗೆ ಶೇ.15ರಿಂದ 30ರಷ್ಟು ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಇಂತಹ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡನೆ ಮಾಡಲಿದೆ. ವಾಣಿಜ್ಯ ಕಟ್ಟಡದ ತೆರಿಗೆ ಹೆಚ್ಚಳಕ್ಕೂ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯದ ಜನರಿಗೆ ಬಿಗ್ ಶಾಕ್ ನೀಡಲಿದೆ.

- Advertisement -

Latest News

error: Content is protected !!