Monday, June 8, 2026
Homeತಾಜಾ ಸುದ್ದಿಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್..!

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್..!

- Advertisement -
- Advertisement -
ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರವು ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುತ್ತದೆ ಎಂದು ಮದ್ಯ ಮಾರಾಟಗಾರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್. ಗುರುಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಕಾಲದಲ್ಲಿ ಮದ್ಯ ಪೂರೈಕೆಯಾಗದೇ ಮದ್ಯ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ಇನ್ನು ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹಲವಾರು ಗೊಂದಲಗಳಿವೆ. ನಮ್ಮನ್ನು ಹೀಗೇಕೆ ಗೋಳು ಹೋಯ್ದುಕೊಳ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಈ ಮೊದಲು ಎಸ್ ಬಿಸಿಎಲ್ ಅಕೌಂಟ್ ಗೆ ಹಣ ಹಾಕಿದರೆ ನಮಗೆ ಬೇಕಾದ ಮದ್ಯ ಸುಲಭವಾಗಿ ಸಿಗುತ್ತಿತ್ತು. ಬಿಲ್ಲಿಂಗ್ ವ್ಯವಸ್ಥೆ ಕೂಡ ಮಾನ್ಯುವಲ್ ಆಗಿತ್ತು. ಆದರೆ ಏಪ್ರಿಲ್ 4ರಿಂದ ಹೊಸ ಪದ್ಧತಿ ಆರಂಭವಾಗಿದ್ದು, ವೆಬ್ ಇಂಡೆಂಟಿಂಗ್ ವ್ಯವಸ್ಥೆ ಜಾರಿಯಾದಾಗಿನಿಂದ ಎಲ್ಲವನ್ನೂ ಹಿಂದಿನ ದಿನವೇ ಪೂರ್ಣಗೊಳಿಸಬೇಕು. ಸಗಟು ಮದ್ಯ ಖರೀದಿದಾರರಿಗೆ ಸಂಕಷ್ಟ ಎದುರಾಗಿದೆ. ಮುಂದಿನ 24 ಗಂಟೆಗಳ ಒಳಗೆ ಮದ್ಯ ಖರೀದಿ ಇಂಡೆಂಟಿಂಗ್ ವ್ಯವಸ್ಥೆಯನ್ನು ಗಂಟೆಯೊಳಗೆ ಸರಿಪಡಿಸಬೇಕು. ಇಲ್ಲವಾದಲ್ಲಿ ಮದ್ಯ ಮಾರಾಟವನ್ನು ನಿಲ್ಲಿಸಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ
ನೀಡಿದರು

- Advertisement -

Latest News

error: Content is protected !!