Friday, May 3, 2024
Homeತಾಜಾ ಸುದ್ದಿವಾಹನ ಸವಾರರಿಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ: ಇನ್ಮುಂದೆ ರಾಜ್ಯ ಹೆದ್ದಾರಿಗಳಲ್ಲೂ ಟೋಲ್...

ವಾಹನ ಸವಾರರಿಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ: ಇನ್ಮುಂದೆ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಫೀ ವಸೂಲಿ

spot_img
- Advertisement -
- Advertisement -

ಬೆಂಗಳೂರು : ವಾಹನ ಮಾಲೀಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಇನ್ಮುಂದೆ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಶುಲ್ಕ ಸಂಗ್ರಹಿಸಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಮುಂದಾಗಿದೆ.

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ರಾಜ್ಯದ ಪ್ರಮುಖ 10 ಹೆದ್ದಾರಿಗಳಲ್ಲಿ ರಸ್ತೆ ಬಳಕೆದಾರರ ಶುಲ್ಕ ಸಂಗ್ರಹಿಸಲು ಏಜೆನ್ಸಿಗಳಿಂದ ಬಿಡ್ ಆಹ್ವಾನಿಸಿದೆ. ಈ ಮೂಲಕ ಪೆಟ್ರೊಲ್, ಡಿಸೇಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ವಾಹನ ಸವಾರರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.

ವಾಹನ ಸವಾರರು ಈಗಾಗಲೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಫಾಸ್ಟ್ಯಾಗ್ ಮೂಲಕ ಟೋಲ್ ಶುಲ್ಕ ಕಟ್ಟುತ್ತಿದ್ದು, ಇದೀಗ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಶುಲ್ಕ ಪಾವತಿಸಬೇಕು. ಸದ್ಯ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಟೋಲ್ ಶುಲ್ಕ ಸಂಗ್ರಹಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಏಜೆನ್ಸಿಗಳಿಂದ ಬಿಡ್ ಆಹ್ವಾನಿಸಿದೆ. ಈ ಮೂಲಕ ವಾಹನ ಮಾಲೀಕರ ಜೇಬಿಗೆ ಕತ್ತರಿ ಬೀಳಲಿದೆ.

- Advertisement -
spot_img

Latest News

error: Content is protected !!