- Advertisement -
![]()
- Advertisement -
ಬೆಂಗಳೂರು: ಆಗಸ್ಟ್ 5 ರಂದು ಮತ ಕಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ರಾಹುಲ್ ಗಾಂಧಿ ನೇತೃತ್ವದ ಪ್ರತಿಭಟನೆಯ ಪೂರ್ವಭಾವಿ ಸಭೆಯ ನಂತರ ವೇಣುಗೋಪಾಲ್ ಗುರುವಾರ ರಾತ್ರಿ ಮಾಧ್ಯಮ ಪ್ರತಿಕ್ರಿಯೆ ನೀಡಿದರು.
ಕರ್ನಾಟಕದಲ್ಲಿ ಚುನಾವಣಾ ಆಯೋಗದ ವಿರುದ್ದ ದೊಡ್ಡ ಹೋರಾಟ ನಡೆಯಲಿದ್ದು, ಮತದಾರರ ಪಟ್ಟಿಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎಂದು ವೇಣುಗೋಪಾಲ್ ಹೇಳಿದ್ದಾರೆ.
ಆಗಸ್ಟ್ 5 ರಂದು ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಆರೋಪದಡಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಚುನಾವಣಾ ಆಯೋಗದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಯಲಿದೆ.
- Advertisement -


