- Advertisement -
![]()
- Advertisement -
ಮಂಗಳೂರು : ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಕೆಲಸದಾಳು ಬದಲಾಗಿ ಮಗನಿಗೇ ಬಿದ್ದ ಘಟನೆ ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ.ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ನಡೆದಿದೆ.
ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರು ಸಂಬಳ ಕೇಳಲು ಬಂದಿದ್ದು ಈ ವೇಳೆ ಇಬ್ಬರ ನಡುವೆ ಜಟಾಪಟಿ ನಡೆದಿದೆ ಎಂದು ಹೇಳಲಾಗಿದೆ. ಸಿಟ್ಟಿಗೆದ್ದ ರಾಜೇಶ್ ಪ್ರಭು ತನ್ನ ಬಳಿ ಇದ್ದ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಎಸ್ಸೆಸ್ಸೆಲ್ಸಿ ಓದುತ್ತಿದ್ದ ಮಗ ಸುಧೀಂದ್ರನ ತಲೆಯ ಭಾಗಕ್ಕೆ ಗುಂಡು ಬಿದ್ದಿದ್ದು ಗಾಯಗೊಂಡಿದ್ದಾನೆ. ಸಂಬಳ ಕೇಳಲು ಬಂದಿದ್ದ ಕೆಲಸದಾಳು ಅಪಾಯದಿಂದ ಪಾರಾಗಿದ್ದಾನೆ.
ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಆಗಮಿಸಿದ್ದಾರೆ.
- Advertisement -


