Thursday, June 4, 2026
Homeಕರಾವಳಿಬೆಳ್ತಂಗಡಿ :ನಿಡ್ಲೆ ರಸ್ತೆ ಪಕ್ಕದಲ್ಲಿ ಹಾಕಿದ್ದ ಅಂಗಡಿಯನ್ನು ಧ್ವಂಸ ಮಾಡಿದ‌ ಕಿಡಿಗೇಡಿಗಳು

ಬೆಳ್ತಂಗಡಿ :ನಿಡ್ಲೆ ರಸ್ತೆ ಪಕ್ಕದಲ್ಲಿ ಹಾಕಿದ್ದ ಅಂಗಡಿಯನ್ನು ಧ್ವಂಸ ಮಾಡಿದ‌ ಕಿಡಿಗೇಡಿಗಳು

- Advertisement -
- Advertisement -

ಬೆಳ್ತಂಗಡಿ : ತನ್ನ ಜೀವನಕ್ಕಾಗಿ ರಸ್ತೆ ಪಕ್ಕದಲ್ಲಿ ತಾತ್ಕಾಲಿಕವಾಗಿ ಹಾಕಿದ್ದ ಅಂಗಡಿಯನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆ ನಿಡ್ಲೆಯಲ್ಲಿ ನ.2 ರಂದು ಬೆಳಕಿಗೆ ಬಂದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆ ಮಜಲು ನಿವಾಸಿ ಅಬ್ದುಲ್ ಅಝಿಝ್.ಎಮ್.ಎಸ್ ಅವರು ನಿಡ್ಲೆ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಬುಡುಜಾಲು ,ಪಾರ್ಪಿಕಲ್ಲು ರಸ್ತೆಯ ಪಕ್ಕದಲ್ಲಿ ಸಂಚಾರಿಸುವ ವಾಹನಗಳಿಗೆ ಯಾವುದೇ ತೊಂದರೆಯಾಗದಂತೆ ಬಹಳ ಎಚ್ಚರಿಕೆಯಿಂದ ತನ್ನ ಜೀವನಕ್ಕಾಗಿ ತಾತ್ಕಾಲಿಕವಾಗಿ ಅಂಗಡಿ(ಶೆಡ್) ಹಾಕಿ ಜೀವನ ನಡೆಸುತ್ತಿದ್ದರು.

ಎಂದಿನಂತೆ ನ. 2 ರಂದು ಬೆಳಗ್ಗೆ 6 ಗಂಟೆಗೆ ಅಂಗಡಿ ತೆರೆಯಲು ಹೋದಾಗ ಅಂಗಡಿಯಲ್ಲಿದ್ದ ವಸ್ತುಗಳನ್ನು ಹಾನಿಗೊಳಿಸಿ ಎಲ್ಲವನ್ನೂ ಧ್ವಂಸ ಮಾಡಿ ಹಾಕಿದ್ದರು. ಇದರ ಹಿಂದೆ ಇರುವ ಅಕ್ರಮಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ.

- Advertisement -

Latest News

error: Content is protected !!