Wednesday, June 24, 2026
Homeಕರಾವಳಿರಸ್ತೆಯ ಬದಿ ತ್ಯಾಜ್ಯ ಎಸೆದ ಅಂಗಡಿ ಮಾಲೀಕ; ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

ರಸ್ತೆಯ ಬದಿ ತ್ಯಾಜ್ಯ ಎಸೆದ ಅಂಗಡಿ ಮಾಲೀಕ; ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

- Advertisement -
- Advertisement -

ಸುಳ್ಯ: ಬೆಳ್ಳಾರೆ -ಸುಳ್ಯ ರಸ್ತೆಯ ಬೆಂಗಮಲೆ ಎಂಬಲ್ಲಿ ರಸ್ತೆಯ ಬದಿ ತ್ಯಾಜ್ಯ ಎಸೆದಿರುವ ಅಂಗಡಿ ಮಾಲೀಕನ ಮೇಲೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸುಳ್ಯ ತಾಲ್ಲೂಕು ಐವರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಗಮಲೆಯ ಮೂರು ಕಡೆಗಳಲ್ಲಿ ತ್ಯಾಜ್ಯದ ಚೀಲಗಳನ್ನು ಎಸೆದಿರುವುದು ಕಂಡು ಬಂದಿದ್ದು, ಈ ಬಗ್ಗೆ ವಿಚಾರಣೆ ನಡೆಸಿದಾಗ ತ್ಯಾಜ್ಯವೂ ಸುಳ್ಯ ಗಾಂಧಿನಗರದ ಅಯೋಧ್ಯಾ ಮೆನ್ಸ್ ಡ್ರೆಸ್ ಆ್ಯಂಡ್ ಸ್ಪೋರ್ಟ್ಸ್‌ ಜೆರ್ಸಿ ಶಾಪ್ ಎಂಬ ವಸ್ತ್ರ ಮಳಿಗೆಗೆ ಸೇರಿದ ಕಸ ಇರುವುದು ಕಂಡು ಬಂದಿದ್ದು, ನಂತರದಲ್ಲಿ ಪಂಚಾಯಿತಿಯ ದಂಡ ಪಾವತಿಸುವಂತೆ ತಿಳಿಸಿದ್ದು, ಮಾಲಿಕ ದಂಡ ಕಟ್ಟಲು ನಿರಾಕರಿಸಿರುವ ಬಗ್ಗೆ ವರದಿಯಾಗಿದೆ.

ಇನ್ನು ಈ ವಿಚಾರವನ್ನು ಐವರ್ನಾಡು ಗ್ರಾಂ ಪಂಚಾಯಿತಿಯ ಆಡಳಿತ ಮಂಡಳಿಯು ಈ ವಿಷಯವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಮನಕ್ಕೆ ತಂದಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಬಗ್ಗೆ  ಪ್ರಕರಣ ದಾಖಲಿಸುವಂತೆ ಸೂಚಿಸಿದ್ದಾರೆ.

ಈ ಬಗ್ಗೆ ಐವರ್ನಾಡು ಪಿಡಿಒ ಶ್ಯಾಮಪ್ರಸಾದ್ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

- Advertisement -

Latest News

error: Content is protected !!