Tuesday, June 9, 2026
Homeತಾಜಾ ಸುದ್ದಿ4 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ, ಜೀವಭಯದಿಂದ ಓರ್ವ ಶರಣು!

4 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ, ಜೀವಭಯದಿಂದ ಓರ್ವ ಶರಣು!

- Advertisement -
- Advertisement -

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಖಾನ್ಮೋಹ್ ಸರಪಂಚ್ ನ್ನು ಅಪಹರಿಸಿ ಹತ್ಯೆಗೈದಿದ್ದ ಉಗ್ರ ಸುಹೈಲ್ ಭಟ್ ಸೇರಿದಂತೆ ನಾಲ್ವರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧರು ಕಾರ್ಯಾಚರಣೆ ನಡೆಸಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಇನ್ನು ಜೀವಭಯದಿಂದ ಉಗ್ರನೋರ್ವ ಶರಣಾಗಿದ್ದಾನೆ.

ಜಮ್ಮು ಕಾಶ್ಮೀರ ಪೊಲೀಸ್ ಹಾಗೂ ಭದ್ರತಾ ಪಡೆ ಖಚಿತ ಮಾಹಿತಿ ಮೇರೆಗೆ ಕಿಲೂರಾ ಪ್ರದೇಶವನ್ನು ಸುತ್ತುವರಿದ ವೇಳೆ ಅಪಾಯದ ಸುಳಿವು ಅರಿತ ಉಗ್ರರು ಭದ್ರತಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ನಡೆಸಿದ ದಾಳಿಗೆ ನಾಲ್ವರು ಉಗ್ರರು ಸಾವನ್ನಪ್ಪಿದ್ದಾರೆ.

ಇನ್ನು ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ ಅಂತಾ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!