Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ ಯುವಕನ ಜೀವ ಉಳಿಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ ಯುವಕನ ಜೀವ ಉಳಿಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು

- Advertisement -
- Advertisement -

ಬೆಳ್ತಂಗಡಿ: ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಆತ್ಮಹತ್ಯೆಗೆ ಯತ್ನಿಸಿದ ಯುವಕನ ಜೀವ ಉಳಿಸಿದ ಘಟನೆ ಶಿಶಿಲದಲ್ಲಿ ಡಿಸೆಂಬರ್ 8 ರಂದು ನಡೆದಿದೆ.

ನಿತಿನ್ ಗೌಡ(28) ಆತ್ಮಹತ್ಯೆಗೆ ಯತ್ನಿಸಿದ ಯುವಕ. ತಕ್ಷಣ ಸ್ಥಳಕ್ಕೆ ಧಾವಿಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು   ಯುವಕನನ್ನು ಸ್ವಂತ ವಾಹನದಲ್ಲಿ ಕೊಕ್ಕಡ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಥಮ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ನಾಕ್ ಆಸ್ಪತ್ರೆಗೆ 108 ಆಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

Latest News

error: Content is protected !!