Saturday, June 6, 2026
Homeಕರಾವಳಿಡಾ.ಬಿ.ಯಶೋವರ್ಮ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ

ಡಾ.ಬಿ.ಯಶೋವರ್ಮ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ

- Advertisement -
- Advertisement -

ಶ್ರೀ.ಧ.ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ, ನಿವೃತ್ತ ಪ್ರಾಂಶುಪಾಲರಾದ ಡಾ.ಬಿ.ಯಶೋವರ್ಮರವರು ನಿಧನಹೊಂದಿ ಕೆಲ ಸಮಯ ಕಳೆದಿದ್ದು, ಮೃತರ ಸ್ಮರಣಾರ್ಥವಾಗಿ ಅವರ ಕುಟುಂಬಸ್ಥರ ವತಿಯಿಂದ ಇಂದು ಉಜಿರೆ ಶ್ರೀ ಜನಾರ್ಧನ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಅಲಂಕಾರ ಪೂಜೆ ಹಾಗೂ ಕೃಷ್ಣಾನುಗ್ರಹ ಸಭಾಭವನದಲ್ಲಿ ಸಮಾರಾಧನೆ ಕಾರ್ಯಕ್ರಮ ಜರುಗಿತು.


ಕಾರ್ಯಕ್ರಮದಲ್ಲಿ ತಾಲೂಕಿನ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ ನುಡಿನಮನ ಸಲ್ಲಿಸಿದರು.

ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಜನಾರ್ಧನ ದೇವಸ್ಥಾನದ ಶರತ್ ಕೃಷ್ಣ ಪಡೈಟ್ನಾಯ ಮತ್ತು ಧರ್ಮಸ್ಥಳದ ಶ್ರದ್ಧಾ ಅಮಿತ್ ಮತ್ತು ಪುತ್ರ ಪುವನ್ ವರ್ಮ ಗುಣಗಾನ ಮಾಡಿದರು. ಈ ಸಂದರ್ಭದಲ್ಲಿ ಕುಟುಂಬ ವರ್ಗದವರು, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್,ಮಾಜಿ ಸಚಿವ ಬಿ ರಮಾನಾಥ ರೈ, ಉಜಿರೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕ ವೃಂದ, ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗದವರು, ಶ್ರೀ ಕ್ಷೇ.ಧ ಗ್ರಾಮಾಭಿವೃದ್ಧಿ ಯೋಜನೆ, ಶ್ರೀ. ಕ್ಷೇ. ಧ. ಸಿಬ್ಬಂದಿ ವರ್ಗದವರು, ಜನಜಾಗೃತಿ ವೇದಿಕೆಯ ಸದಸ್ಯರು,ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಗಳು ಮತ್ತು ಹಳೆವಿದ್ಯಾರ್ಥಿಗಳು, ಬದುಕು ಕಟ್ಟೋಣ ಬನ್ನಿ ತಂಡದ ಸದಸ್ಯರು, ನಾಗರಿಕರು,ಯಶೋವರ್ಮರವರ ಅಭಿಮಾನಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!