Saturday, August 29, 2026
Homeಆರಾಧನಾಕಾಪುವಿನಲ್ಲಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಚಾಲನೆ

ಕಾಪುವಿನಲ್ಲಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಚಾಲನೆ

- Advertisement -
- Advertisement -

ಕಾಪು : ಮಾರಿಗುಡಿ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಸಮರ್ಪಣಾ ಸಮಿತಿ ನೇತೃತ್ವದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಪ್ರಪಂಚದಾದ್ಯಂತ ನೆಲೆಸಿರುವ ಸಮಸ್ತ ಭಕ್ತರಿಂದ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಮಂಗಳವಾರದಂದು ಚಾಲನೆ ನೀಡಲಾಯಿತು.

ದೇಗುಲದ ತಂತ್ರಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಅವರ ಉಪಸ್ಥಿತಿಯಲ್ಲಿ ಸ್ವರ್ಣ ಗೌರಿ ಪೂಜೆಯೊಂದಿಗೆ ಸ್ವರ್ಣ ಸಮರ್ಪಣೆಗೆ ಚಾಲನೆ ದೊರಕಿತು.

ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ತಹಶೀಲ್ದಾರ್ ಡಾ. ಪ್ರತಿಭಾ ಆರ್. ಸಹಿತ ನೂರಾರು ಮಂದಿ ಗಣ್ಯರು, ಮಹಿಳೆಯರು ಸ್ವರ್ಣ ಗೌರಿ ಪೂಜೆಯ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.

ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು‌. ಮುಂಬಯಿ ಹೇರಂಬ ಇಂಡಸ್ಟ್ರೀಸ್ ನ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಂಬಯಿ ವಿ.ಕೆ. ಗ್ರೂಪ್ ಆಫ್ ಕಂಪನೀಸ್ ಆಡಳಿತ ನಿರ್ದೇಶಕ ಕೆ. ಎಂ‌. ಶೆಟ್ಟಿ ಸ್ವರ್ಣ ಗದ್ದುಗೆಯ ಮಾದರಿ ಅನಾವರಣಗೊಳಿಸಿದರು.

ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಇಂದಿನಿಂದ ಅವಕಾಶ : ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಗೆ ನೂತನ ಸ್ವರ್ಣ ಗದ್ದುಗೆಯು ಸುಮಾರು 20 ಕೆಜಿ ಚಿನ್ನ, 160 ಕೆಜಿ ಬೆಳ್ಳಿಯೊಂದಿಗೆ ನಿರ್ಮಾಣಗೊಳ್ಳಲಿದೆ. ಭಕ್ತರಿಗೆ 9 ಗ್ರಾಂ, 18 ಗ್ರಾಂ, 99 ಗ್ರಾಂ, 243 ಗ್ರಾಂ, 450 ಗ್ರಾಂ, 999 ಗ್ರಾಂ ಸ್ವರ್ಣ ಸಮರ್ಪಣೆಗೆ ಅವಕಾಶವಿದ್ದು ಹೊಸ ಚಿನ್ನದೊಂದಿಗೆ ಭಕ್ತರು ತಾವು ಉಪಯೋಗಿಸಿದ, ಬಳಸಿದ ಚಿನ್ನಗಳನ್ನೂ ಹರಕೆಯ ರೂಪದಲ್ಲಿ ಸಮರ್ಪಿಸಲು ಅವಕಾಶವಿದೆ ಎಂದು ಸ್ವರ್ಣ ಸಮರ್ಪಣಾ ಸಮಿತಿ ಪ್ರಧಾನ ಕಾರ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದರು.

ಸ್ವರ್ಣ ಗದ್ದುಗೆ 2025 ಮಾರ್ಚ್ 2 ರಂದು ಪ್ರತಿಷ್ಠೆ : ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸಮಗ್ರ ಜೀರ್ಣೋದ್ಧಾರ ಕಾಮಗಾರಿಯು ಸರಕಾರದ ಯಾವುದೇ ಅನುದಾನವಿಲ್ಲದೇ ಕೇವಲ‌ ಭಕ್ತರ ದೇಣಿಗೆಯೊಂದಿಗೆ ಮಾರಿಯಮ್ಮನ‌ ಅನುಗ್ರಹದಿಂದ ನಡೆಯುತ್ತಿದೆ. ಪ್ರಥಮ ಹಂತದಲ್ಲಿ ಶಿಲಾಮಯ ಗರ್ಭಗುಡಿ, ಸುತ್ತುಪೌಳಿ ನಿರ್ಮಾ ಸಹಿತ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು ಮುಂದೆ‌ ರಾಜಗೋಪುರ, ಭೋಜನ ಶಾಲೆ, ಶೌಚಾಲಯ ನಿರ್ಮಾಣ ಸಹಿತ ಮೂಲ ಸೌಕರ್ಯಗಳ ಜೋಡಣೆಗೆ ಚಾಲನೆ ನೀಡಲಾಗಿದೆ. ಇಂದು ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದ್ದು 2025 ಮಾರ್ಚ್ 2 ರಂದು ನೂತನ ಶಿಲಾಮಯ ಗರ್ಭಗುಡಿಯಲ್ಲಿ ಸ್ವರ್ಣ ಗದ್ದುಗೆ ಪ್ರತಿಷ್ಠೆ ನಡೆಯಲಿದೆ. 

- Advertisement -

Latest News

error: Content is protected !!