ಮೈಸೂರು: ಸಕ್ರಿಯ ರಾಜಕಾರಣಕ್ಕೆ ಚಾಮರಾಜನಗರ ಕ್ಷೇತ್ರದ ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿವೃತ್ತಿ ಘೋಷಿಸಿದ್ದಾರೆ. ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ವಿಶೇಷವಾಗಿ ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ಹುಟ್ಟಿದ ದಿನವಾದ ಇಂದು ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ವಿ.ಶ್ರೀನಿವಾಸ ಪ್ರಸಾದ್, ನಾನು ಆತ್ಮತೃಪ್ತಿಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುತ್ತಿದ್ದೇನೆ. ನಾಲ್ಕು ವರ್ಷದ ಹಿಂದೆಯೇ ನಿವೃತ್ತಿ ಬಯಸಿದ್ದೆ. ಆದರೆ ರಾಜಕೀಯ ಬೆಳವಣಿಗೆ ಬೇರೆಯಾದ ಕಾರಣ ಮತ್ತೆ ಸ್ಪರ್ಧೆ ಮಾಡಿದ್ದೆ. ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಈ ಮಾತಿನಿಂದ ನಾನು ಹಿಂದೆ ಸರಿಯುವುದೂ ಇಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸಕ್ರೀಯ ರಾಜಕೀಯಕ್ಕೆ ಸಂಸದ ವಿ. ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.