Wednesday, June 3, 2026
Homeತಾಜಾ ಸುದ್ದಿಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ಇದುವರೆಗೂ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತೆ?

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ಇದುವರೆಗೂ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತೆ?

- Advertisement -
- Advertisement -

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಶಾದ್ಯಂತ ದೇಣಿಗೆ ಸಂಗ್ರಹ ನಡೆಸಿದ್ದು, ಇದುವರೆಗೂ 2,100 ಕೋಟಿ ರೂ. ಸಂಗ್ರಹವಾಗಿರುವುದಾಗಿ ತಿಳಿದುಬಂದಿದೆ.

ದೇಗುಲ ನಿರ್ಮಾಣಕ್ಕೆ ಜನವರಿ 15ರಂದು ದೇಣಿಗೆ ಸಂಗ್ರಹ ಕಾರ್ಯ ಆರಂಭಗೊಂಡಿದ್ದು, ಈ ಅಭಿಯಾನಕ್ಕೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಸದಸ್ಯರೂ ಆಗಿರುವ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಂದ ನಿನ್ನೆ (ಫೆ.27) ತೆರೆ ಬಿದ್ದಿದೆ.

ಬೆಂಗಳೂರಿನ ಲಾಲ್​ಬಾಗ್​ ವೆಸ್ಟ್​ಗೇಟ್​ ಬಳಿಯ ಅನಂತವನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಮಂದಿರ ನಿರ್ಮಾಣಕ್ಕೆ 1,500 ಕೋಟಿ ಹಣ ಸಂಗ್ರಹವಾಗುತ್ತೆಂದು ಅಂದುಕೊಂಡಿದ್ದೆವು. ರಾಮ ಭಕ್ತರು ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು ಕೊಟ್ಟಿದ್ದಾರೆ. ಈಗಿನ ಮಾಹಿತಿ ಪ್ರಕಾರ ಸುಮಾರು 2,100 ಕೋಟಿ ರೂ. ಸಂಗ್ರಹವಾಗಿದೆ. ಪೂರ್ಣ ಮಾಹಿತಿ ಇನ್ನೂ ಬರಬೇಕಿದೆ ಎಂದು ಶ್ರೀಗಳು ಹೇಳಿದ್ದಾರೆ.

- Advertisement -

Latest News

error: Content is protected !!