Thursday, June 4, 2026
HomeUncategorizedನಟಿ ಶುಭಾ ಪೂಂಜ ಸಾಂಸಾರಿಕ ಜೀವನದಲ್ಲಿ ಬಿರುಗಾಳಿ; ಡಿವೋರ್ಸ್ ಗಾಗಿ ಕೋರ್ಟ್ ಮೆಟ್ಟಿಲೇರಿದ ಶುಭಾ ಪೂಂಜ-...

ನಟಿ ಶುಭಾ ಪೂಂಜ ಸಾಂಸಾರಿಕ ಜೀವನದಲ್ಲಿ ಬಿರುಗಾಳಿ; ಡಿವೋರ್ಸ್ ಗಾಗಿ ಕೋರ್ಟ್ ಮೆಟ್ಟಿಲೇರಿದ ಶುಭಾ ಪೂಂಜ- ಸುಮಂತ್ ಬಿಲ್ಲವ

- Advertisement -
- Advertisement -

ಬೆಂಗಳೂರು: ನಟಿ ಶುಭಾ ಪೂಂಜ ಸಾಂಸಾರಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು ಡಿವೋರ್ಸ್ ಗಾಗಿ ಶುಭಾ ಪೂಂಜ- ಸುಮಂತ್ ಬಿಲ್ಲವ ಕೋರ್ಟ್ ಮೆಟ್ಟಿಲೇರಿದ್ದಾರೆ.

ನಟಿ ಶುಭಾ ಪೂಂಜಾ, ಉದ್ಯಮಿ ಸುಮಂತ್ ಬಿಲ್ಲವ ಅವರನ್ನು ಪ್ರೀತಿಸಿ 2022ರ ಜನವರಿಯಲ್ಲಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಈ ದಂಪತಿ ಅತ್ಯಂತ ಖುಷಿ ಖುಷಿಯಾಗಿಯೇ ಕಾಲ ಕಳೆದಿದ್ದರು. ಆದರೆ, ಈಗ ಏಕಾಏಕಿ ಡಿವೋರ್ಸ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ಕೋರಿ ಈ ದಂಪತಿ ನ್ಯಾಯಾಲಯಕ್ಕೆ ಜಂಟಿ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಅರ್ಜಿ ಸಲ್ಲಿಕೆಯಾಗಿದ್ದು, ಮುಂದಿನ ವಿಚಾರಣೆಯ ವೇಳೆ ಶುಭಾ ಪೂಂಜಾ ಮತ್ತು ಸುಮಂತ್ ಇಬ್ಬರೂ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆ ಇದೆ. ಆದರೆ, ಇಬ್ಬರ ನಡುವಿನ ವಿಚ್ಛೇದನಕ್ಕೆ ನಿಖರವಾದ ಕಾರಣವೇನು ಎಂಬುದನ್ನು ಬಹಿರಂಗಪಡಿಸಲು ಸುಮಂತ್ ನಿರಾಕರಿಸಿದ್ದಾರೆ. ಈಗಾಗಲೇ ಶುಭಾ ಅವರು ಸೋಶಿಯಲ್ ಮೀಡಿಯಾದಿಂದ ಪತಿ ಜೊತೆಗಿನ ಫೋಟೋ ಡಿಲೀಟ್ ಮಾಡಿದ್ದಾರೆ.

- Advertisement -

Latest News

error: Content is protected !!