Friday, June 27, 2025
Homeಕರಾವಳಿಮಂಗಳೂರುಖ್ಯಾತ ನಟಿ ಶುಭಾ ಪೂಂಜಾ ಅವರ ತಾಯಿ ವಿಧಿವಶ

ಖ್ಯಾತ ನಟಿ ಶುಭಾ ಪೂಂಜಾ ಅವರ ತಾಯಿ ವಿಧಿವಶ

spot_img
- Advertisement -
- Advertisement -

ಬೆಂಗಳೂರು; ಖ್ಯಾತ ನಟಿ ಶುಭಾ ಪೂಂಜಾ ಅವರ ತಾಯಿ ವಿಧಿವಶರಾಗಿದ್ದಾರೆ. ಶುಭಾ ಪೂಂಜಾ ಅವರ ತಾಯಿಗೆ 70 ವರ್ಷ ವಯಸ್ಸಾಗಿತ್ತು. ಕಳೆದ 4 ತಿಂಗಳಿಂದ ನ್ಯುಮೋನಿಯಾದಿಂದ ಬಳಲುತ್ತಿದ್ದರು ಎನ್ನಲಾಗಿದೆ. ತಾಯಿಯ ಆಸೆಯಂತೆ ಕೊನೆ ಕಾರ್ಯಗಳನ್ನು ಶುಭಾ ಪೂಂಜಾ ಕುಟುಂಬ ಮಂಗಳೂರಲ್ಲಿ ನೆರವೇರಿಸಿದೆ. ತಾಯಿಯ ಪಾರ್ಥಿವ ಶರೀರವನ್ನು ಮಂಗಳೂರಿಗೆ ಕೊಂಡೊಯ್ದ ಕುಟುಂಬಸ್ಥರು ಅಂತಿಮ ನಮನ ಸಲ್ಲಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿರುವ ಅವರು,  ಅಮ್ಮ ನನ್ನ ನೀನು ಯಾಕೆ ಬಿಟ್ಟು ಹೋದೆ. ನೀನು ಇಲ್ಲದೇ ನನಗೆ ಜೀವನವಿಲ್ಲ ಎಂದು ನಟಿ ಶುಭಾ ಪೂಂಜಾ ತನ್ನ ತಾಯಿಯ ಫೋಟೋ ಹಂಚಿಕೊಂಡಿದ್ದಾರೆ. ಅಮ್ಮ 24 ಗಂಟೆ ನಿನ್ನ ಜೊತೇನೆ ಇರುತ್ತಿದ್ದೆ. ಈಗ ನಾನು ಏನು ಮಾಡಲಿ. ಎಲ್ಲಿ ಹೋಗಲಿ ಯಾರಿಗೋಸ್ಕರ ವಾಪಸ್ ಮನೆಗೆ ಬರಲಿ. ನೀನು ನನ್ನ ಯಾಕೆ ಬಿಟ್ಟು ಹೋದೆ. ನಿನ್ನ ಬಿಟ್ಟು ನನಗೆ ಬದುಕಲು ಬರೋದು ಇಲ್ಲ. ನನ್ನ ಇಡೀ ಜೀವನಕ್ಕೆ ಅರ್ಥವಿಲ್ಲದೆ ಆಯ್ತು. ನನ್ನ ಇಡೀ ಜೀವನವೇ ನೀನಾಗಿದ್ದೆ ನನ್ನ ಯಾಕೆ ಬಿಟ್ಟು ಹೋದೆ ಎಂದು ಶುಭಾ ಪೂಂಜಾ ಅಮ್ಮನಿಲ್ಲದ ನೋವು ಹಂಚಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!