Wednesday, June 24, 2026
Homeತಾಜಾ ಸುದ್ದಿಬಾಹ್ಯಾಕಾಶಕ್ಕೆ ತೆರಳಿದ್ದ ಗಗನಯಾನಿ ಶುಭಾಂಶು ಶುಕ್ಲಾ ಇಂದು ಭೂಮಿಗೆ ವಾಪಸ್

ಬಾಹ್ಯಾಕಾಶಕ್ಕೆ ತೆರಳಿದ್ದ ಗಗನಯಾನಿ ಶುಭಾಂಶು ಶುಕ್ಲಾ ಇಂದು ಭೂಮಿಗೆ ವಾಪಸ್

- Advertisement -
- Advertisement -

ನವದೆಹಲಿ: ಬಾಹ್ಯಾಕಾಶಕ್ಕೆ ತೆರಳಿದ್ದ ಭಾರತೀಯ ಗಗನಯಾನಿ ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ ಇಂದು ಭೂಮಿಗೆ ವಾಪಾಸಾಗಲಿದ್ದಾರೆ.

ಆಕ್ಸಿಯಮ್ 4 ಬಾಹ್ಯಕಾಶ ಪ್ರಯೋಗದ ಎಲ್ಲಾ ಪರೀಕ್ಷೆಗಳು ಯಶಸ್ವಿಯಾಗಿದ್ದು, ನಿನ್ನೆ ಸಂಜೆ 4:35ಕ್ಕೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಅನ್‌ಡಾಕಿಂಗ್ ಪ್ರಕ್ರಿಯೆ ಆರಂಭವಾಗಿತ್ತು.

ಶುಭಾಂಶು ಶುಕ್ಲಾ ನೇತೃತ್ವದ ಗಗನಯಾತ್ರಿಗಳ ತಂಡವು ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಮೆರಿಕಾದ ಕ್ಯಾಲಿಫೋರ್ನಿಯಾದ ಕಡಲತೀರಕ್ಕೆ ಬಂದಿಳಿಯಲಿದ್ದಾರೆ.

ಜೂನ್ 25ರಂದು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಡ್ರ‍್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಗಗನಯಾನಿಗಳ ತಂಡ ತೆರಳಿತ್ತು.

ಶುಕ್ಲಾ ಜೊತೆ ಇತರ ಮೂವರು ಗಗನಯಾನಿಗಳಾದ ಪೆಗ್ಗಿ ವಿಟ್ಸನ್, ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮತ್ತು ಟಿಬೋರ್ಕಾಪು ಕೂಡಾ ಭೂಮಿಗೆ ವಾಪಸಾಗುತ್ತಿದ್ದಾರೆ.

- Advertisement -

Latest News

error: Content is protected !!