Friday, June 26, 2026
Homeಕರಾವಳಿಉಡುಪಿಉಡುಪಿ ; ನೇಜಾರು ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ಭದ್ರತೆ ಜವಾಬ್ದಾರಿ ವಹಿಸಿದ್ದ ಎಸ್ಸೈ...

ಉಡುಪಿ ; ನೇಜಾರು ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ಭದ್ರತೆ ಜವಾಬ್ದಾರಿ ವಹಿಸಿದ್ದ ಎಸ್ಸೈ ವಿರುದ್ಧ ಆರೋಪ;   ರಿಸರ್ವ್ ಎಸ್ಸೈ ವಿರುದ್ಧ ಮದ್ಯಪಾನ ಸೇವಿಸಿ ಕರ್ತವ್ಯ ನಿರ್ವಹಿಸಿದ ಆರೋಪ

- Advertisement -
- Advertisement -

ಉಡುಪಿ :  ಉಡುಪಿ ನೇಜಾರು ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ಭದ್ರತೆ ಜವಾಬ್ದಾರಿ ವಹಿಸಿದ್ದ ಬೆಂಗಳೂರಿನ ರಿಸರ್ವ್ ಎಸ್ಸೈ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಎಸ್ಸೈ ಮದ್ಯಪಾನ ಸೇವಿಸಿ ಕರ್ತವ್ಯ ನಿರ್ವಹಿಸಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಆರೋಪಿ ಪ್ರವೀಣ್  ಚೌಗುಲೆಯನ್ನು ಬೆಂಗಳೂರು ಜೈಲಿನಿಂದ ಉಡುಪಿಗೆ ಕರೆ ತರುವಾಗ ಭದ್ರತೆ ಕರ್ತವ್ಯದಲ್ಲಿದ್ದ ಆರ್‌ಎಸ್ಸೈ ಮದ್ಯಪಾನ ಸೇವಿಸಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ಆರೋಪಿ ಪ್ರವೀಣ್ ಭದ್ರತೆಯ ಹೊಣೆ ಹೊತ್ತ ಎಸ್‌ಐ ವಿರುದ್ದ ಶಿಸ್ತು ಕ್ರಮಕ್ಕೆ ಸಂಬಂಧಪಟ್ಟ ಅಧಿಕಾರಿಗೆ ವರದಿ ಸಲ್ಲಿಸಲಾಗುವುದು ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಕೋರ್ಟ್ ಒಳಗೆ ಕೂಡ ಅನುಚಿತವಾಗಿ ವರ್ತಿಸುತ್ತಿರುವುದಾಗಿ ದೂರುಗಳು ಕೇಳಿಬಂದವು. ಈ ಹಿನ್ನೆಲೆಯಲ್ಲಿ ಎಸ್ಪಿ ಯವರು ಆರ್‌ಎಸ್ಸೈ ವಿರುದ್ದ ಕ್ರಮಕ್ಕೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!