Friday, April 26, 2024
Homeಚಿಕ್ಕಮಗಳೂರುರಸ್ತೆಯಿಲ್ಲದೇ ಮನೆಗೆ ಬಾರದ ವಾಹನ;ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯನ್ನು ಜೋಳಿಗೆಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದ ಸಂಬಂಧಿಕರು

ರಸ್ತೆಯಿಲ್ಲದೇ ಮನೆಗೆ ಬಾರದ ವಾಹನ;ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯನ್ನು ಜೋಳಿಗೆಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದ ಸಂಬಂಧಿಕರು

spot_img
- Advertisement -
- Advertisement -

ಚಿಕ್ಕಮಗಳೂರು: ಮನೆ ರಸ್ತೆ ಸೌಲಭ್ಯವಿಲ್ಲದೇ ವಾಹನ ಬಾರದ ಹಿನ್ನೆಲೆ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರನ್ನು ಸಂಬಂಧಿಕರು ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ನಡೆದಿದೆ.

ವೃದ್ಧೆ ವೆಂಕಮ್ಮ(85) ಇವರು ಅನಾರೋಗ್ಯಕ್ಕೆ ಒಳಗಾಗಿದ್ದರು. ಆದರೆ ಇವರ ಮನೆಗೆ ರಸ್ತೆ ಸಂಪರ್ಕ ಇಲ್ಲದೇ ಇದ್ದದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವುದು ದೊಡ್ಡ ಸವಾಲಾಗಿತ್ತು. ಕೊನೆಗೆ ಸಂಬಂಧಿಕರು ಅನಿವಾರ್ಯವಾಗಿ ಜೋಳಿಗೆಯಲ್ಲೇ ವೆಂಕಮ್ಮ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಇನ್ನು 2021ರಲ್ಲಿಯೇ ರಸ್ತೆ ಇಲ್ಲ ರಸ್ತೆ ಮಾಡಿಸಿಕೊಡಿ ಎಂದು ಸಚಿವ ಆರ್ ಆಶೋಕ್, ಜಿಲ್ಲಾಧಿಕಾರಿಗಳಿಗೆ ವೆಂಕಮ್ಮ ಮನವಿ ಮಾಡಿದ್ದರು. ಆದರೂ ಇವರ ಮನವಿಗೆ ಯಾವುದೇ ಸ್ಪಂದನೆ ದೊರಕದೇ ಇರೋದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!