- Advertisement -
- Advertisement -
ಮೈಸೂರು : ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣಗೆ ಕೂಡಲೇ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ದೇವೇಗೌಡರು ಬರೆದಿರುವ ಪತ್ರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೆ ಅವರು. ಈಗ ಪತ್ರ ಬರೆದು ಏನು ಮಾಡುತ್ತಾರೆ. ಎಂದು ಪ್ರಶ್ನಿಸಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣಗೆ ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ. ನನ್ನ ತಾಳ್ಮೆ ಪರೀಕ್ಷಿಸಬೇಡ ಎಲ್ಲೇ ಇದ್ದರೂ ಬಂದು ಪೊಲೀಸರಿಗೆ ಶರಣಾಗು ಎಂದು ತಿಳಿಸಿದ್ದಾರೆ.
- Advertisement -