Wednesday, June 24, 2026
Homeತಾಜಾ ಸುದ್ದಿಕರ್ನಾಟಕ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಸಿದ್ಧರಾಮಯ್ಯ; ಆರ್‌. ಅಶೋಕ್‌

ಕರ್ನಾಟಕ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಸಿದ್ಧರಾಮಯ್ಯ; ಆರ್‌. ಅಶೋಕ್‌

- Advertisement -
- Advertisement -

ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ, ‘ ಕರ್ನಾಟಕ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಸಿದ್ಧರಾಮಯ್ಯನವರು’ ಪೋಸ್ಟ್ ಮಾಡಿ ಸಿದ್ಧರಾಮಯ್ಯ ವಿರುದ್ಧ ಗುಡುಗಿದ್ದಾರೆ. 

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ expiry date ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ನಿಮ್ಮದು. ಇನ್ನು ಬಿ.ಕೆ. ಹರಿಪ್ರಸಾದ್‌ ಅವರು ತಮ್ಮ ಮೇಲೆ ಪದೇ ಪದೇ ವಾಗ್ದಾಳಿ ನಡೆಸಿದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗದಷ್ಟು, ಕನಿಷ್ಠ ಪಕ್ಷ ಪ್ರತ್ಯುತ್ತರ ಕೂಡ ನೀಡಲಾಗದಷ್ಟು ಅಸಹಾಯಕರ ತಾವು ಎಂದು ಅಶೋಕ್‌ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರೇ ಮತ್ತೊಮ್ಮೆ ಮುಂದಿನ ಐದು ವರ್ಷ ಈ ದೇಶದ ಸ್ಟ್ರಾಂಗ್ ಪ್ರಧಾನಿ ಆಗಿ ಮುಂದುವರೆಯುತ್ತಾರೆ ಎಂದು ವಿಶ್ವಾಸದಿಂದ ಹೇಳುವ ಧೈರ್ಯ ನನಗಿದೆ. ನಿಮಗೆ ತಾಕತ್ತಿದ್ದರೆ, ನೀವು ಹೇಳಿಕೊಳ್ಳುವಂತೆ ತಾವು ಸ್ಟ್ರಾಂಗ್ ಮುಖ್ಯಮಂತ್ರಿಯೇ ಆಗಿದ್ದರೆ, “ನಾನೇ ಐದು ವರ್ಷ ಮುಖ್ಯಮಂತ್ರಿ” ಎಂದು ಒಮ್ಮೆ ಹೇಳಿ ನೋಡೋಣ.

ನಿಮಗೆ ಖಂಡಿತ ಹೇಳಲು ಆಗಲ್ಲ. ಅದಕ್ಕೆ ತಮ್ಮನ್ನು ಈ ರಾಜ್ಯ ಕಂಡ ಅತ್ಯಂತ ವೀಕ್ ಮುಖ್ಯಮಂತ್ರಿ ಎಂದು ಜನ ಮಾತಾಡಿಕೊಳ್ಳುವುದು ಎಂದು ಅಶೋಕ್‌ ಸಿದ್ಧರಾಮಯ್ಯ ವಿರುದ್ಧ ಗುಡುಗಿದ್ದಾರೆ.

- Advertisement -

Latest News

error: Content is protected !!