Tuesday, June 30, 2026
Homeತಾಜಾ ಸುದ್ದಿಮತಬ್ಯಾಂಕ್ ಗಾಗಿ ಸಿದ್ದರಾಮಯ್ಯ ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ

ಮತಬ್ಯಾಂಕ್ ಗಾಗಿ ಸಿದ್ದರಾಮಯ್ಯ ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ

- Advertisement -
- Advertisement -

ಬಳ್ಳಾರಿ: ಕೇವಲ ಮತ ಬ್ಯಾಂಕ್ ಗೋಸ್ಕರ ಸಿದ್ದರಾಮಯ್ಯ ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.‌

ಬಳ್ಳಾರಿ ಜಿಲ್ಲೆಯ ತೋರಣಗಲ್ ನಲ್ಲಿ ಇಂದು ನಡೆದ ಬಿಜೆಪಿ ಎಸ್ ಟಿ. ಮೋರ್ಛಾ ರಾಜ್ಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಕಟೀಲ್, ಭಿಕ್ಷಾಟನೆ ಮಾಡುವ ಸ್ಥಿತಿಗೆ ಸಿದ್ಧರಾಮಯ್ಯ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನವರ ಚಿಂತನೆ ರಾವಣನದು, ಮುಖ ಮಾತ್ರ ಸಿದ್ದರಾಮಯ್ಯನದು‌ ಎಂದು ಲೇವಡಿ ಮಾಡಿರುವ ನಳೀನ್ ಕುಮಾರ್ ಕಟೀಲ್,
ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಸಿದ್ದರಾಮಣ್ಣ ನಿಮ್ಮ ರಾಷ್ಟ್ರೀಯ ಅಧ್ಯಕ್ಷ ಯಾವ ಕಾರಣಕ್ಕೆ ಬೇಲ್ ಮೇಲೆ ಇದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ, ಇವತ್ತು ಕಾಂಗ್ರೇಸ್ ಸೇರಬೇಕು ಅಂದ್ರೆ ಅವನ ಮೇಲೆ 50 ಕ್ರಿಮಿನಲ್ ಕೇಸ್ ಇರಬೇಕು‌ ಎಂದು ವ್ಯಂಗ್ಯ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಭ್ರಷ್ಟರ, ಕ್ರಿಮಿನಲ್ ಗಳ ಮತ್ತಿ ಉಗ್ರವಾದಿಗಳ ಪಾರ್ಟಿ ಕಾಂಗ್ರೆಸ್ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!