Thursday, June 4, 2026
Homeತಾಜಾ ಸುದ್ದಿಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಿಸಿದರು.

ಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು. ತೀವ್ರ ಸುಸ್ತು, ಬಳಲಿಕೆಯಿಂದಾಗಿ ಹೆಚ್‌ಡಿಕೆ ಮಂಗಳವಾರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.ಅವರ ಆರೋಗ್ಯ ಸ್ಥಿರವಾಗಿದ್ದು ಯಾವುದೇ ತೊಂದರೆಗಳಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ನಿನ್ನೆ ಕುಮಾರ ಸ್ವಾಮೀ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು.ಇಂದು ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದ್ದು ಗುಣಮುಖರಾಗುತ್ತಿದ್ದಾರೆ.  ಸಿದ್ದರಾಮಯ್ಯ ಸಚಿವ ಚೆಲುವರಾಯ ಸ್ವಾಮಿ ಅವರೊಂದಿಗೆ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

- Advertisement -

Latest News

error: Content is protected !!