- Advertisement -
- Advertisement -
ಬೆಂಗಳೂರು: ಗ್ರೀನ್ ಜೋನ್ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿ ತೆರೆಯುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಸಮಸ್ಯೆ ಇದೆ. ಅಬಕಾರಿ ಸುಂಕ ಬಂದರೆ ಹಣಕಾಸು ಸ್ಥಿತಿ ಸುಧಾರಿಸುತ್ತದೆ. ಷರತ್ತು ವಿಧಿಸಿ ಮದ್ಯದ ಅಂಗಡಿ ತೆರೆದರೆ ಒಳ್ಳೆಯದು. ರಾಜ್ಯದ ಆರ್ಥಿಕ ದೃಷ್ಟಿಯಿಂದ ಮದ್ಯದ ಅಂಗಡಿ ತೆರೆಯಲು ಅವಕಾಶ ನೀಡುವುದು ಒಳ್ಳೆಯದು ಎಂದು ತಿಳಿಸಿದ್ದಾರೆ.
ಲಾಕ್ ಡೌನ್ ಜಾರಿ ಮಾಡಿರುವುದರಿಂದ ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಮೇ 3 ರ ನಂತರ ಲಾಕ್ ಡೌನ್ ನಿಯಮದಲ್ಲಿ ಮತ್ತಷ್ಟು ಸಡಿಲಿಕೆಯಾದಲ್ಲಿ ಗ್ರೀನ್ ಜೋನ್ ಗಳಲ್ಲಿ ಅವಕಾಶ ಸಿಗಬಹುದೆಂಬ ನಿರೀಕ್ಷೆಯಲ್ಲಿ ಮದ್ಯಪ್ರಿಯರಿದ್ದಾರೆ. ಅಬಕಾರಿ ಸಚಿವರೂ ಕೂಡ ಮದ್ಯ ಮಾರಾಟಕ್ಕೆ ಅವಕಾಶ ನೀಡಲು ಸಿಎಂಗೆ ಮನವಿ ಮಾಡಿದ್ದಾರೆ. ಆದರೆ, ಸದ್ಯಕ್ಕಂತೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿಲ್ಲ ಎಂದು ಹೇಳಲಾಗಿದೆ.
- Advertisement -