Tuesday, July 1, 2025
Homeತಾಜಾ ಸುದ್ದಿಪಾಝಿಲ್ ಕೊಲೆ ಸಿಎಂ ಜಿಲ್ಲೆಯಲ್ಲಿರುವಾಗಲೇ ನಡೆದಿರುವುದು ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ: ಸಿದ್ಧರಾಮಯ್ಯ

ಪಾಝಿಲ್ ಕೊಲೆ ಸಿಎಂ ಜಿಲ್ಲೆಯಲ್ಲಿರುವಾಗಲೇ ನಡೆದಿರುವುದು ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ: ಸಿದ್ಧರಾಮಯ್ಯ

spot_img
- Advertisement -
- Advertisement -

ಬೆಂಗಳೂರು: ಫಾಜಿಲ್ ಹತ್ಯೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು. ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು.

ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರು ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್‌ನಲ್ಲಿ ಫಾಜಿಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ. ಇನ್ನು ಈ ಘಟನೆಯು ಸಿಎಂ ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆಯಾಗಿದ್ದು, ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ ಎಂದರು.

ಇನ್ನು ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿದೆ. ಆದರೆ, ರಾಜ್ಯ ಬಿಜೆಪಿ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಸರಣಿ ಟ್ವಿಟ್ ಮೂಲಕ ತಮ್ಮ ಆಕ್ರೋಶವನ್ನು ಸಿದ್ಧರಾಮಯ್ಯ ಹೊರಹಾಕಿದ್ದಾರೆ.

- Advertisement -
spot_img

Latest News

error: Content is protected !!