Saturday, June 27, 2026
Homeತಾಜಾ ಸುದ್ದಿ'ಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್ಚೊ ಬಿಜೆಪಿ ನಾಯಕರ ಮಾನ ಮುಚ್ಚೊಕ್ಕೆ 90 ಜೊತೆ ಬಟ್ಟೆ ಖರೀದಿಸಿದ್ದೀನಿ'-ಸಿದ್ದರಾಮಯ್ಯ

‘ಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್ಚೊ ಬಿಜೆಪಿ ನಾಯಕರ ಮಾನ ಮುಚ್ಚೊಕ್ಕೆ 90 ಜೊತೆ ಬಟ್ಟೆ ಖರೀದಿಸಿದ್ದೀನಿ’-ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಿನ ಆರೋಪ – ಪ್ರತ್ಯಾರೋಪಗಳು ಮುಂದುವರೆದಿದೆ. ಇದೀಗ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ.

ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ. ಬೇಕಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ ಎಂದು ಹೇಳಿದ್ದಾರೆ. ಇದೇ ವೇಳೆ ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಿಗೆ ಕೂಡಾ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯನವರು ಈ ರೀತಿ ಹೇಳಿಕೆ ನೀಡುವುದಕ್ಕೂ ಕಾರಣವಿದೆ. ಮಾಸ್ಕಿಯಲ್ಲಿ ನಡೆದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್, ಬಿಜೆಪಿ ಗೆಲ್ಲುವ ಪಕ್ಷವಾಗಿದ್ದು, ಕಾಂಗ್ರೆಸ್‌ ಸೋಲಿನ ಪಕ್ಷವಾಗಿದೆ. ಕಾಂಗ್ರೆಸ್‌ ಒಳಜಗಳದ ಮಿತಿಮೀರಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಗೆ ಗುಡ್ ಬೈ ಹೇಳಿ ಕಾಂಗ್ರೆಸ್‌ ಸೇರಿದ್ದರು. ಇದೀಗ ಕಾಂಗ್ರೆಸ್‌ನಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು ಅದಕ್ಕಾಗಿ ತಿಂಗಳಲ್ಲೇ ಪಕ್ಷ ಬಿಡಲಿದ್ದಾರೆ. ಅದಕ್ಕಾಗಿಯೇ ಅವರು 90 ಜೊತೆ ಬಟ್ಟೆ ಖರೀದಿಸಿರುವುದಾಗಿ ವ್ಯಂಗ್ಯವಾಡಿದರು.

- Advertisement -

Latest News

error: Content is protected !!