Sunday, June 14, 2026
Homeಚಿಕ್ಕಮಗಳೂರುಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಿಂದ ಸ್ಪರ್ಧಿಸಲು ಸಿದ್ದರಾಮಯ್ಯಗೆ ಒತ್ತಾಯ

ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಿಂದ ಸ್ಪರ್ಧಿಸಲು ಸಿದ್ದರಾಮಯ್ಯಗೆ ಒತ್ತಾಯ

- Advertisement -
- Advertisement -

ಚಿಕ್ಕಮಗಳೂರು:  2023ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಸಚಿನ್‌ ಮೀಗಾ ಮನವಿ ಸಲ್ಲಿಸಿದ್ದಾರೆ.  

ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವದಲ್ಲಿ ಮನವಿ ಮಾಡಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರ ವರ್ತನೆಯಿಂದ ಬೇಸತ್ತಿದ್ದಾರೆ. ದಿವಂಗತ ಇಂದಿರಾಗಾಂಧಿ ಅವರಿಗೆ ಪುನರ್ಜನ್ಮ ನೀಡಿದ  ಕ್ಷೇತ್ರದಿಂದ ನಿಮ್ಮಂತಹ ಜನನಾಯಕರು ಈ ಬಾರಿ ಸ್ಪರ್ಧಿಸಿದರೆ ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷಕ್ಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪುನರ್ಜನ್ಮವಾಗಲಿದೆ ಎಂದು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!