Wednesday, May 8, 2024
Homeತಾಜಾ ಸುದ್ದಿಗೃಹಲಕ್ಷ್ಮಿಗೆ ಯೋಜನೆಗೆ  ಜುಲೈ 19ರಂದು ಸಿಎಂ ಸಿದ್ದರಾಮಯ್ಯ ಚಾಲನೆ

ಗೃಹಲಕ್ಷ್ಮಿಗೆ ಯೋಜನೆಗೆ  ಜುಲೈ 19ರಂದು ಸಿಎಂ ಸಿದ್ದರಾಮಯ್ಯ ಚಾಲನೆ

spot_img
- Advertisement -
- Advertisement -

ಬೆಂಗಳೂರು: ಗೃಹಲಕ್ಷ್ಮಿಗೆ ಯೋಜನೆಗೆ  ಜುಲೈ 19ರಂದು ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಚಾಲನೆ ನೀಡಲಿದ್ದಾರೆ.ಅಂದಿನಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.


ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ಪಾಸ್‌ಬುಕ್ ಮಾಹಿತಿ ನೀಡಬೇಕು.ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ ಬೇರೊಂದು ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಬೇಕಾಗಿದ್ದಲ್ಲಿ ಆ ಬ್ಯಾಂಕ್ ಖಾತೆಯ ಪಾಸ್ ಬುಕ್ ನೀಡಬೇಕು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಅವರು ಗ್ರಾಮ ಓನ್, ಸೇವಾಕೇಂದ್ರ ಸೇರಿದಂತೆ ವಿವಿಧೆಡೆಯಲ್ಲಿ ಗೃಹಲಕ್ಷ್ಮೀ ಯೋಜನೆಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ರಾಷ್ಟ್ರೀಯ ನಾಯಕರಿಂದ ಯೋಜನೆಯನ್ನು ಉದ್ಘಾಟನೆ ಮಾಡಲಾಗುತ್ತಿದೆ. ಇದಕ್ಕಾಗಿ ಅವರಿಗೆ ಪತ್ರವನ್ನು ಬರೆಯಲಾಗಿದೆ. ಅವರು ಇಂದು ಮಧ್ಯಾಹ್ನ 2 ಗಂಟೆಗೆ ನಮಗೆ ಖಚಿತ ಮಾಡಲಿದ್ದಾರೆ ಎಂದು ಹೇಳಿದರು.

ಸೋಮವಾರ ಸಂಜೆ 5 ಗಂಟೆಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಜುಲೈ.17ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತದೆ. ರಾಷ್ಟ್ರೀಯ ನಾಯಕರು ಒಪ್ಪದೇ ಇದ್ದರೇ ಜುಲೈ.19ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಚಾಲನೆ ನೀಡಲಿದ್ದಾರೆ ಎಂದರು.

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಯಾವುದೇ ಡೆಡ್ ಲೈನ್ ಇಲ್ಲ. 1.28 ಕೋಟಿ ಕುಟುಂಬಕ್ಕೆ ಗೃಹಲಕ್ಷ್ಮೀ ಯೋಜನೆ ಲಾಭ ಆಗುತ್ತದೆ. ಅರ್ಜಿ ಸಲ್ಲಿಕೆ ಸಂಬಂಧ 1902 ಸಹಾಯವಾಣಿಗೆ ಕರೆ ಮಾಡಿ ಪರಿಹರಿಸಿಕೊಳ್ಳಬಹುದು. ಗೃಹ ಲಕ್ಷ್ಮೀ ಯೋಜನೆಗೆ ಆಧಾರ್ ಕಡ್ಡಾಯವಾಗಿದೆ ಎಂದು ತಿಳಿಸಿದರು.

ಅರ್ಜಿಯ ಬಗ್ಗೆ ಗೊಂದಲಗಳಿದ್ದರೇ 8147500500 ಮೊಬೈಲ್ ಸಂಖ್ಯೆಗೆ ಎಸ್ ಎಂ ಎಸ್ ಮಾಡಿ ಪರಿಹರಿಸಿಕೊಳ್ಳಬಹುದು ಎಂದು ಹೇಳಿದರು. ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಗೃಹ ಲಕ್ಷ್ಮೀ ಯೋಜನೆಯ 2000 ರೂ ಹಣ ಯಜಮಾನಿ ಮಹಿಳೆಯರಿಗೆ ಆಗಸ್ಟ್ 16 ಇಲ್ಲವೇ 17ರಂದು ಖಾತೆಗೆ ಜಮಾ ಆಗಲಿದೆ ಎಂದು ತಿಳಿಸಿದರು.

ನೋಂದಣಿಗೆ ಪಡಿತರ ಚೀಟಿ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ ಬೇಕಿದೆ. ಆಧಾರ್ ಸಂಖ್ಯೆ ಜೋಡಣೆಯಾದ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ 2000 ರೂ ಹಣ ಜಮಾ ಆಗಲಿದೆ. ಈ ಬಗ್ಗೆ ಮಾಹಿತಿ ಎಸ್ ಎಂ ಎಸ್ ಮೂಲಕವೂ ತಲುಪಲಿದೆ ಎಂದರು.

ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಯಾರಾದರೂ ಶುಲ್ಕ ಕೇಳಿದರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಜುಲೈ.17 ಅಥವಾ 19ರಿದಂ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ ಎಂದು ತಿಳಿಸಿದರು.

- Advertisement -
spot_img

Latest News

error: Content is protected !!