Thursday, June 4, 2026
Homeತಾಜಾ ಸುದ್ದಿಸಿಎಂ ಅವರ 16ನೇ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್; ಮಾರ್ಚ್ 14 ರಂದು ಆಯವ್ಯಯ ಮಂಡಿಸಲಿರುವ...

ಸಿಎಂ ಅವರ 16ನೇ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್; ಮಾರ್ಚ್ 14 ರಂದು ಆಯವ್ಯಯ ಮಂಡಿಸಲಿರುವ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ 16ನೇ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 14 ರಂದು ಸಿದ್ದರಾಮಯ್ಯ ಅವರು ಆಯವ್ಯಯ ಮಂಡಿಸಲಿದ್ದಾರೆ.

ಮಾರ್ಚ್ 10ರಿಂದ ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 14 ರಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಜಂಟಿ ಅಧಿವೇಶನದ ಮುಂದುವರೆದ ಭಾಗವಾಗಿ ಬಜೆಟ್ ಅಧಿವೇಶನ ನಡೆಯಲಿದೆ. ಒಟ್ಟು 3 ವಾರಗಳ ಕಾಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ಜನವರಿ 2ರಂದು ಹೊಸ ವರ್ಷದ ಮೊದಲ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಬಗ್ಗೆ ಅಧಿಕೃತ ಅದೇಶ ಹೊರಡಿಸಲಾಗುವುದು.

ಬಜೆಟ್ ಅಧಿವೇಶನದ ಪೂರ್ವದಲ್ಲಿ ಮಾರ್ಚ್ 10ರಿಂದ 4 ದಿನಗಳ ಕಾಲ ಜಂಟಿ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಮಾರ್ಚ್ 14 ರಂದು ಸಿಎಂ ಸಿದ್ದರಾಮಯ್ಯ ಅವರು 16 ನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಮತ್ತೊಂದು ದಾಖಲೆ ಬರೆಯಲಿದ್ದಾರೆ.

- Advertisement -

Latest News

error: Content is protected !!