- Advertisement -
![]()
- Advertisement -
ಬೆಂಗಳೂರು; ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ.ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದು ಸಿದ್ದುಗೆ ಬಂಧನ ಭೀತಿ ಎದುರಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲಾಗಿದ್ದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರಾ ಅನ್ನೋ ಪ್ರಶ್ನೆ ಎದುರಾಗಿದೆ.
ಸಿಎಂ ಸಿದ್ದರಾಮಯ್ಯ ಸದ್ಯ ಕಾವೇರಿ ನಿವಾಸದಲ್ಲೇ ಇದ್ದಾರೆ. ಪ್ರಾಸಿಕ್ಯೂಷನ್ ಬಳಿಕ ಕಾನೂನಾತ್ಮಕವಾಗಿ ಹೋರಾಡಲು ನಿರ್ಧರಿಸಿದ್ದಾರೆ.ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ ಎನ್ನಲಾಗಿದೆ.
- Advertisement -


