- Advertisement -
- Advertisement -
ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಸಿಎಂ ರಾಜೀನಾಮೆ ಆಗ್ರಹಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದೀಗ ಬಿಜೆಪಿ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು ನಾನು ಯಾಕೆ ರಾಜೀನಾಮೆ ಕೊಡಲಿ ರಾಜೀನಾಮೆ ನೀಡುವ ಮಾತಿಲ್ಲ ಎಂದಿದ್ದಾರೆ.
ಹೈಕೋರ್ಟ್ ತೀರ್ಪಿನ ಬಳಿಕ ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ನಾನು ಯಾಕೆ ಸಿಎಂ ಸ್ಥಾನಕ್ಕೆ ರಾಜಿನಾಮೆ ಕೊಡಬೇಕು,? ರಾಜೀನಾಮೆಯ ಮಾತೇ ಬರಲ್ಲ ಎಂದಿದ್ದಾರೆ.
ಸದ್ಯ ನಾನು ತೀರ್ಪು ಏನಿದೆ ಅಂತ ಓದಿಲ್ಲ. ತೀರ್ಪು ಓದಿದ ಬಳಿಕ ಮತ್ತಷ್ಟು ಈ ಕುರಿತು ಮಾತನಾಡುತ್ತೇನೆ. ನಾನು ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ.
- Advertisement -