Friday, June 5, 2026
Homeತಾಜಾ ಸುದ್ದಿಇಂದು ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ: ಜ್ಞಾನಯೋಗಾಶ್ರಮದ ಆವರಣದಲ್ಲೇ ಅಂತ್ಯಕ್ರಿಯೆ

ಇಂದು ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ: ಜ್ಞಾನಯೋಗಾಶ್ರಮದ ಆವರಣದಲ್ಲೇ ಅಂತ್ಯಕ್ರಿಯೆ

- Advertisement -
- Advertisement -

ವಿಜಯಪುರ : ಅನಾರೋಗ್ಯದಿಂದ ಬಳಲುತ್ತಿದ್ದ ಅಪರೂಪದ ಸಂತ, ನಡೆದಾಡುವ ದೇವರು, ಖ್ಯಾತ ಪ್ರವಚನಕಾರ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ನಿನ್ನೆ ಸಂಜೆ 6.05 ಕ್ಕೆ ಲಿಂಗೈಕ್ಯರಾಗಿದ್ದು, ಸಿದ್ದೇಶ್ವರ ಶ್ರೀಗಳ ಆಶಯದಂತೆ ಇಂದು ಸಂಜೆ ಜ್ಞಾನಯೋಗಾಶ್ರಮದ ಆವರಣದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ.

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಇತ್ತೀಚೆಗೆ ಏರುಪೇರಾಗಿತ್ತು , ನಂತರ ಶ್ರೀಗಳಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ವಿಧಿವಶರಾಗಿದ್ದಾರೆ.

- Advertisement -

Latest News

error: Content is protected !!