- Advertisement -
- Advertisement -
ಭಾರತೀಯ ಮಾಜಿ ಉದ್ಯಮಿ ವಿಜಯ್ ಮಲ್ಯ ಮಗ ಸಿದ್ಧಾರ್ಥ್ ಮಲ್ಯ ತಮ್ಮ ಬಹುಕಾಲದ ಗೆಳತಿ ಜಾಸ್ಮಿನ್ ಅವರೊಂದಿಗೆ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ವಿವಾಹದ ಫೋಟೊಗಳನ್ನು ಹಂಚಿಕೊಂಡಿರುವ ದಂಪತಿ, ‘FOREVER’ ಎಂದು ಬರೆದುಕೊಂಡಿದ್ದಾರೆ. ಲಂಡನ್‌ನಲ್ಲಿ ಶನಿವಾರ ವಿವಾಹ ಕಾರ್ಯಕ್ರಮ ನಡೆದಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಫೋಟೊದಲ್ಲಿ ಜಾಸ್ಮಿನ್ ಅವರು ಬಿಳಿ ಬಣ್ಣದ ಗೌನ್ ಧರಿಸಿದ್ದು, ಸಿದ್ಧಾರ್ಥ್ ಪಚ್ಚೆ ಹಸಿರು ಬಣ್ಣದ ವೆಲ್ವೆಟ್ ಟುಕ್ಸೆಡೊ ಧರಿಸಿದ್ದಾರೆ.
ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ, ಕಳೆದ ವರ್ಷದ ನವೆಂಬರ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮಾಡೆಲ್ ಹಾಗೂ ನಟನಾಗಿರುವ ಸಿದ್ದಾರ್ಥ್ ಮಲ್ಯ, ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ನೆಲೆಸಿದ್ದಾರೆ.
- Advertisement -