ಬೀದರ್: ಮಜಾಭಾರತ ರಿಯಾಲಿಟಿ ಶೋ ಖ್ಯಾತಿಯ ಸಿದ್ದಾರ್ಥ ಪರಶನೂರ(36) ಅವರು ಶವವಾಗಿ ಪತ್ತೆಯಾಗಿದ್ದಾರೆ. ಹುಮನಾಬಾದ್ ಸಮೀಪದ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ಸಿದ್ದಾರ್ಥ ಅವರ ಮೃತದೇಹ ಪತ್ತೆಯಾಗಿದೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ನಗರದ ಟೀಚರ್ಸ್ ಕಾಲೊನಿಯಲ್ಲಿ ವಾಸವಿದ್ದ ಸಿದ್ದಾರ್ಥ ಪರಶನೂರ (36) ಜೂನ್ 13 ರಂದು ಸ್ನೇಹಿತರೊಂದಿಗೆ ಮನೆಯಿಂದ ಹೋಗಿದ್ದರು. ಆದರೆ ಮೂರು ದಿನಗಳಾದರೂ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಮಂಗಳವಾರ ಬೆಳಿಗ್ಗೆ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಅದರಂತೆ ಮೊಬೈಲ್ ಲೊಕೇಷನ್ ಆಧರಿಸಿ ತನಿಖೆ ನಡೆಸಿದಾಗ ಅರಣ್ಯ ಪ್ರದೇಶದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಸಾವಿನ ನಿಖರ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ಗೊತ್ತಾಗಲಿದೆ.
ಮಜಾಭಾರತ ರಿಯಾಲಿಟಿ ಶೋ ಖ್ಯಾತಿಯ ಸಿದ್ದಾರ್ಥ ಪರಶನೂರ ಶವವಾಗಿ ಪತ್ತೆ
- Advertisement -
![]()
- Advertisement -
- Advertisement -


