Sunday, May 5, 2024
Homeಕರಾವಳಿಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳ ಸಾಮೂಹಿಕ ವಿವಾಹ, ಸಂಪೂರ್ಣ ಖರ್ಚು ದೇವಾಲಯದ ವತಿಯಿಂದ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳ ಸಾಮೂಹಿಕ ವಿವಾಹ, ಸಂಪೂರ್ಣ ಖರ್ಚು ದೇವಾಲಯದ ವತಿಯಿಂದ !

spot_img
- Advertisement -
- Advertisement -

ಪ್ರತಿ ತಿಂಗಳಿಗೊಮ್ಮೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳ ಸಾಮೂಹಿಕ ವಿವಾಹ ನಡೆಯಲಿದೆ. ಈ ವರ್ಷ ಮಾರ್ಚ್ 31, ಏಪ್ರಿಲ್ 25, ಮೇ 21, ಜೂನ್27 ಹಾಗೂ ಜುಲೈ 7ರಂದು ಸರಳ ಸಾಮೂಹಿಕ ವಿವಾಹವು ನಡೆಯಲಿದೆ.

ಮುಂಜಾನೆಯ ಅಭಿಜಿನ್‌ ಲಗ್ನ ಸುಮೂಹೂರ್ತದಲ್ಲಿ ಸಂಪ್ರದಾಯಗಳಿಗೆ ಅನುಗುಣವಾಗಿ ನೆರವೇರಲಿದೆ ಎಂದು ಶ್ರೀ ದೇವಳದ ಆಡಳಿತಾಧಿಕಾರಿ ಹಾಗೂ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್‌ ಉಳ್ಳಾಲ್‌ ಮಾಹಿತಿ ನೀಡಿದ್ದಾರೆ.

ಧನ ಸಹಕಾರ ಇಂತಿದೆ -ಸರಳ ವಿವಾಹವಾಗುವ ವರನಿಗೆ ಹೂವಿನ ಹಾರ, ಪಂಚೆ, ಶರ್ಟ್, ಶಲ್ಯ, ಪೇಟ, ಬಾಸಿಂಗ ಇತ್ಯಾದಿಗಳಿಗೆ ರು.5 ಸಾವಿರ ಹಾಗೂ ವಧುವಿಗೆ ಹೂವಿನ ಹಾರ, ಧಾರೆ ಸೀರೆ, ರವಿಕೆ, ಕಾಲುಂಗುರ ಇತ್ಯಾದಿಗಳಿಗೆ ರು.10 ಸಾವಿರ ನೀಡಲಾಗುವುದು. ರು. 40 ಸಾವಿರ ಮೌಲ್ಯದ ಅಂದಾಜು 8 ಗ್ರಾಂ ತೂಕದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡನ್ನು ದೇವಾಲಯದಿಂದ ಭರಿಸಲಾಗುವುದು.

ಹಾಗೆಯೇ ಕಂದಾಯ ಇಲಾಖೆಯಿಂದ ಆದರ್ಶ ವಿವಾಹ ಯೋಜನೆಯಡಿಯಲ್ಲಿ ರು.10 ಸಾವಿರದ ನಿಶ್ಚಿತ ಠೇವಣಿ ನೀಡಲಾಗುವುದು.

ಸಾಮೂಹಿಕ ವಿವಾಹವಾಗಲು ಬಯಸುವ ವಧು ವರರು ದೇವಳದ ಕಚೇರಿಯನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆದುಕೊಳ್ಳಬಹುದು ಅಥವಾ 7795489588, 8762919833, 9448529828ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದರು.

- Advertisement -
spot_img

Latest News

error: Content is protected !!