Wednesday, June 24, 2026
Homeಪ್ರಮುಖ-ಸುದ್ದಿಖ್ಯಾತ ಹಿನ್ನಲೆ ಗಾಯಕ ಎಸ್‌.ಪಿ ಬಾಲಸುಬ್ರಹ್ಮಣ್ಯಂಗೆ ಕೊರೊನಾ ಸೋಂಕು,ಆಸ್ಪತ್ರೆಗೆ ದಾಖಲು

ಖ್ಯಾತ ಹಿನ್ನಲೆ ಗಾಯಕ ಎಸ್‌.ಪಿ ಬಾಲಸುಬ್ರಹ್ಮಣ್ಯಂಗೆ ಕೊರೊನಾ ಸೋಂಕು,ಆಸ್ಪತ್ರೆಗೆ ದಾಖಲು

- Advertisement -
- Advertisement -

ಚೆನ್ನೈ : ಖ್ಯಾತ ಹಿನ್ನೆಲೆ ಗಾಯಕ ಎಸ್ ‌ಪಿ ಬಾಲಸುಬ್ರಹ್ಮಣ್ಯಂ ಅವರು ಕೋವಿಡ್ -19 ಅವರು ಕೂಡ ಕೊರೋನಾ ಸೋಂಕಿಗೆ ಈಡಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇಂದು ಬೆಳಿಗ್ಗೆ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಈ ಬಗ್ಗೆ ಫೇಸ್ ಬುಕ್ ಲೈವ್ ಮೂಲಕ ಎಸ್ ಪಿ ಬಿ ಸ್ಪಷ್ಟಪಡಿಸಿದ್ದಾರೆ. ನನಗೆ ಕಳೆದ ಕೆಲವು ದಿನಗಳಿಂದ ಜ್ವರ, ಶೀತ ಹಾಗೇ ಎದೆನೋವಿನಂತಹ ಲಕ್ಷಣಗಳು ಕಾಣಿಸಿಕೊಂಡಿತ್ತು. ಪರೀಕ್ಷೆ ನಡೆಸಿದಾಗ ಕೋವಿಡ್ ಅನ್ನೋದು ಗೊತ್ತಾಗಿದೆ. ಆದರೆ ನಾನೀಗ ಆರಾಮಾಗಿದ್ದೇನೆ. ಶೀತ ಬಿಟ್ರೆ ಬೇರೇನೂ ಸಮಸ್ಯೆ ಇಲ್ಲ ಎಂದು ಅವರು ಹೇಳಿದ್ದಾರೆ. ಹಾಗೇ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

- Advertisement -

Latest News

error: Content is protected !!