ಬೆಳ್ತಂಗಡಿ: ದೇಶದೆಲ್ಲೆಡೆ ಕಟ್ಟು ನಿಟ್ಟಿನ ಲಾಕ್ ಡೌನ್ ನೀತಿ ಸಂಹಿತೆ ಜಾರಿಯಾಗಿರುವ ಕಾರಣ ಅದೆಷ್ಟೋ ಬಡ ಕುಟುಂಬಗಳು ಬದುಕಲು ಬೇಕಾಗುವ ಅಗತ್ಯ ವಸ್ತುಗಳಿಗೂ ಪರಿತಪಿಸುವಂತಾಗಿದೆ. ಈ ಸಂಧಿಗ್ದ ಪರಿಸ್ಥಿತಿಯನ್ನು ಮನಗಂಡಿರುವ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವತಿಯಿಂದ ಸಂಸ್ಥೆಯ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ಹಾಗೂ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಜನಾರ್ದನರವರ ನಿರ್ದೇಶನದಂತೆ ಉಜಿರೆಯ ಬದುಕು ಕಟ್ಟೋಣ ಬನ್ನಿ ತಂಡದ ಸಹಕಾರದೊಂದಿಗೆ ಬೆಳ್ತಂಗಡಿ ತಾಲೂಕಿನ ತೀರಾ ಬಡತನವಿರುವ 200 ಕುಟುಂಬಗಳಿಗೆ ಆಹಾರೋತ್ಪನ್ನಗಳ ಕಿಟ್ ಗಳನ್ನು ವಿತರಿಸಲಾಯಿತು.
ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರವರು ಕಿಟ್ ಗಳನ್ನು ವಿತರಿಸಿ,ಸಿರಿ ಸಂಸ್ಥೆ ಯ ಸಾಮಾಜಿಕ ಕಳಕಳಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಸಂಸ್ಥೆಯ ಯೋಜನಾಧಿಕಾರಿ ರೋಹಿತ್, ಬದುಕು ಕಟ್ಟೋಣ ಬನ್ನಿ ತಂಡದ ಮುಖ್ಯಸ್ಥ ಮೋಹನ್ ಕುಮಾರ್, ರಾಜೇಶ್ ಪೈ, ಸಿರಿ ಸಂಸ್ಥೆಯ ಮಾರುಕಟ್ಟೆ ಪ್ರಬಂಧಕ ಸುಧಾಕರ್, ಗ್ರಾಮೀಣ ಮಳಿಗೆಗಳ ಯೋಜನಾಧಿಕಾರಿ ವಿನ್ಸೆಂಟ್ ಲೋಬೊ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಜನಜಾಗೃತಿ ವಿಭಾಗದ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್ ಉಪಸ್ಥಿತರಿದ್ದರು.