Thursday, June 4, 2026
Homeಮನರಂಜನೆವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ನಟಿ ಸಿರಿ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ನಟಿ ಸಿರಿ

- Advertisement -
- Advertisement -

ಬೆಂಗಳೂರು: ರಂಗೋಲಿ ಹಾಗೂ ಬಿಗ್ ಬಾಸ್ ಕನ್ನಡ 10 ಖ್ಯಾತಿಯ ನಟಿ ಸಿರಿ  ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮನೆಯವರು ನೋಡಿದ ಹುಡುಗನ ಜೊತೆ ಸಿರಿ ಜೂನ್ 13 ರಂದು ಸರಳವಾಗಿ ಸಾಂಸಾರಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿನ ಭೋಗ ನಂದೀಶ್ವರ ದೇವಾಲಯದಲ್ಲಿ ಸಿರಿ ಮತ್ತು ಉದ್ಯಮಿ ಪ್ರಭಾಕರ್ ಮದುವೆ ಗುರುಹಿರಿಯರ ಸಮ್ಮುಖದಲ್ಲಿ ನಡೆದಿದೆ. ರಂಗೋಲಿ, ಬದುಕು ಸೀರಿಯಲ್‌ಗಳ ಮೂಲಕ ಟಿವಿ ಪ್ರೇಕ್ಷಕರ ಗಮನ ಸೆಳೆದಿದ್ದ ಅವರು ಬಿಗ್‌ಬಾಸ್‌ನಲ್ಲಿ ತಮ್ಮ ಮದುವೆಗೆ ಸಂಬಂಧಪಟ್ಟಂತೆ ಆತಂಕವನ್ನು ವ್ಯಕ್ತಪಡಿಸಿದ್ದರು. ಸೀರಿಯಲ್‌ ಜಗತ್ತಿನ್ ಹೊತ್ತಿನಲ್ಲಿ ಅವರು ತಮ್ಮ ಹೆಸರು ಮಾಡಿದ್ದರು. ಸಿನಿಮಾ ರಂಗದಲ್ಲಿಯೂ ಗುರುತಿಸಿಕೊಂಡಿದ್ದರು. ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

- Advertisement -

Latest News

error: Content is protected !!