Friday, June 5, 2026
Homeತಾಜಾ ಸುದ್ದಿಮದುವೆಯಾದರೆ ಬೇರೆಯಾಗುತ್ತೇವೆಂದು ಆತ್ಮಹತ್ಯೆಗೆ ಶರಣಾದ ಅವಳಿ ಸಹೋದರಿಯರು

ಮದುವೆಯಾದರೆ ಬೇರೆಯಾಗುತ್ತೇವೆಂದು ಆತ್ಮಹತ್ಯೆಗೆ ಶರಣಾದ ಅವಳಿ ಸಹೋದರಿಯರು

- Advertisement -
- Advertisement -

ಮಂಡ್ಯ: ನಾವು ಬೇರೆ ಬೇರೆ ಮನೆಗೆ ಮದುವೆಯಾಗಿ ಹೋದರೆ ಪರಸ್ಪರ ದೂರ ಆಗುತ್ತೇವೆಂದು ಮನನೊಂದು ಅವಳಿ ಸಹೋದರಿಯರು ಆತ್ಮಹತ್ಯೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಇಲ್ಲಿನ ಹುಣಸನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸುರೇಶ್ ಮತ್ತು ಯಶೋಧ ದಂಪತಿ ಪುತ್ರಿಯರಾದ ದೀಪಿಕಾ ಮತ್ತು ದಿವ್ಯ(19) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಸಹೋದರಿಯರಾಗಿದ್ದಾರೆ.

ಈ ಇಬ್ಬರು ಅವಳಿ ಸಹೋದರಿಯರು ಚಿಕ್ಕಂದಿನಿಂದ ಬಹಳ ಅನ್ಯೋನ್ಯತೆಯಿಂದ ಇದ್ದು, ಇದೀಗ ಇಬ್ಬರು ಪುತ್ರಿಯರನ್ನು ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಪೋಷಕರು ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಬೇರೆ ಬೇರೆ ಮನೆಗೆ ಮದುವೆಯಾದರೆ ತಮ್ಮ ಬಾಂಧವ್ಯ ಕೊನೆಯಾಗುತ್ತದೆ ಎಂದು ನಿರ್ಧರಿಸಿ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!