Saturday, June 6, 2026
Homeತಾಜಾ ಸುದ್ದಿಮಹಿಳೆಯ ಕಿಡ್ನ್ಯಾಪ್ ಕೇಸ್ ; ಹೆಚ್.ಡಿ. ರೇವಣ್ಣ ಸೇರಿದಂತೆ 7 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್...

ಮಹಿಳೆಯ ಕಿಡ್ನ್ಯಾಪ್ ಕೇಸ್ ; ಹೆಚ್.ಡಿ. ರೇವಣ್ಣ ಸೇರಿದಂತೆ 7 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್  ಸಲ್ಲಿಕೆ

- Advertisement -
- Advertisement -

ಬೆಂಗಳೂರು :ಮೈಸೂರಿನ ಕೆ ಆರ್ ನಗರದ ಮಹಿಳೆಯ ಕಿಡ್ನ್ಯಾಪ್ ಕೇಸಿಗೆ ಸಂಬಂಧಪಟ್ಟಂತೆ ಹೆಚ್.ಡಿ. ರೇವಣ್ಣ ಸೇರಿದಂತೆ 7 ಆರೋಪಿಗಳ ವಿರುದ್ಧ ಎಸ್ ಐಟಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಮಹಿಳೆಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ಇಂದು ಬೆಂಗಳೂರಿನ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.

ರೇವಣ್ಣ ಸೂಚನೆ ಮೇರೆಗೆ ಅಪಹರಣ ಮಾಡಲಾಗಿತ್ತು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದ್ದು, ರೇವಣ್ಣ ಪತ್ನಿ ಭವಾನಿ ರೇವಣ್ಣ ಪಾತ್ರದ ಬಗ್ಗೆಯೂ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಎಸ್ ಐಟಿ ಮಾಜಿ ಸಚಿವ ಹೆಚ್.ಡಿ. ರೇವಣ್ಣರನ್ನು ಬಂಧಿಸಿತ್ತು.

- Advertisement -

Latest News

error: Content is protected !!