Wednesday, June 24, 2026
Homeಅಪರಾಧಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣ; ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಉಪಾಧ್ಯಕ್ಷನಿಗೆ...

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣ; ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಉಪಾಧ್ಯಕ್ಷನಿಗೆ ಎಸ್.ಐ.ಟಿ ನೋಟೀಸ್

- Advertisement -
- Advertisement -

ಬೆಳ್ತಂಗಡಿ : ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ವಿಚಾರವಾಗಿ ಧರ್ಮಸ್ಥಳ ಗ್ರಾಮಪಂಚಾಯತಿನ ಮಾಜಿ ಅಧ್ಯಕ್ಷ ಕೇಶವ ಗೌಡ ಹಾಗೂ ಹಾಲಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರಿಗೆ ಎಸ್.ಐ.ಟಿ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದೆ.

ಸೆ.19 ರಂದು ಬೆಳಗ್ಗೆ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ ಬೆಳಾಲು ಅವರು ವಿಚಾರಣೆಗೆ ಹಾಜರಾಗಿದ್ದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಕೇಶವ ಗೌಡ ಹಾಗೂ ಶ್ರೀನಿವಾಸ ರಾವ್ ಅವರು ಹಲವು ಬಾರಿ ಮಾದ್ಯಮಗಳಿಗೆ ಹೇಳಿಕೆ ನೀಡಿ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಅನಾಥ ಶವಗಳು ಸಿಕ್ಕಿದ್ದು ಅದರ ಎಲ್ಲ ದಾಖಲೆಗಳು ಗ್ರಾಮಪಂಚಾಯತಿನಲ್ಲಿದೆ ಎಂದು ಹೇಳಿಕೆ ನೀಡಿದ್ದರು. ಅದೇರೀತಿ ಕೇಶವ ಗೌಡ ಸ್ಮಶಾನಾಗುವ ಮೊದಲು ಬಂಗ್ಲೆ ಗುಡ್ಡ ಪರಿಸರಸಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದರು.

ಈ ಎಲ್ಲ ಹಿನ್ನಲೆಯಲ್ಲಿ ಇವರಿಬ್ಬರಿಗೂ ನೊಟೀಸ್ ನೀಡಿ ವಿಚಾರಣೆಗೆ ಕರೆಸಲಾಗಿದ್ದು, ಇಬ್ಬರು ಕೂಡ ವಿಚಾರಣೆ ಮುಗಿಸಿ 1:30 ಕ್ಕೆ ವಾಪಸ್ ತೆರಳಿದ್ದಾರೆ.

- Advertisement -

Latest News

error: Content is protected !!