Wednesday, June 24, 2026
Homeಅಪರಾಧಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣ; ಕೇರಳ ಮೂಲದ ಯೂಟ್ಯೂಬರ್ ಮನಾಫ್‌ಗೆ ಎಸ್‌ಐಟಿ ನೋಟಿಸ್

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣ; ಕೇರಳ ಮೂಲದ ಯೂಟ್ಯೂಬರ್ ಮನಾಫ್‌ಗೆ ಎಸ್‌ಐಟಿ ನೋಟಿಸ್

- Advertisement -
- Advertisement -

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಯೂಟ್ಯೂಬರ್ ಮನಾಫ್‌ಗೂ ಎಸ್‌ಐಟಿ ನೋಟಿಸ್ ನೀಡಿದೆ.

ಧರ್ಮಸ್ಥಳಕ್ಕೆ ಆಗಮಿಸಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಎಸ್‌ಐಟಿ ತಂಡ ರಚನೆಯಾಗುವ ಮೊದಲೇ ಹಲವು ವೀಡಿಯೊಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಮುನಾಫ್ ಹರಿಬಿಟ್ಟಿದ್ದ ಎನ್ನಲಾಗಿದೆ. ಇನ್ನು ತನ್ನ ಯೂಟ್ಯೂಬ್ ನಲ್ಲಿ ಬುರುಡೆ ತೆಗೆಯುವ ವಿಡಿಯೋ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಮನಾಫ್‌ಗೆ ನೋಟಿಸ್ ನೀಡಲಾಗಿದೆ ತಿಳಿದು ಬಂದಿದೆ.

- Advertisement -

Latest News

error: Content is protected !!