Thursday, June 4, 2026
Homeಕರಾವಳಿಬೆಳ್ತಂಗಡಿ : ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ; ಇಂದು ತಲೆಬುರುಡೆಯ ಸ್ಥಳ ಮಹಜರು ಪ್ರಕ್ರಿಯೆ

ಬೆಳ್ತಂಗಡಿ : ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ; ಇಂದು ತಲೆಬುರುಡೆಯ ಸ್ಥಳ ಮಹಜರು ಪ್ರಕ್ರಿಯೆ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಜಾಗದಲ್ಲಿ ಎಸ್.ಐ.ಟಿ ಅಧಿಕಾರಿಗಳು ದೂರುದಾರನ ಜೊತೆ ಜುಲೈ28 ರಂದು ಹೋಗಿ ಸ್ಥಳ ಮಹಜರು ನಡೆಸಲಿದ್ದಾರೆ.

ಮೊದಲು ಎಸ್.ಐ.ಟಿ ಅಧಿಕಾರಿಗಳು ಬೆಳ್ತಂಗಡಿ ಕಚೇರಿಗೆ ಬಂದಿದ್ದು. ದೂರುದಾರನನ್ನು ಕರೆಸಿಕೊಂಡಿದ್ದು ಕೆಲವು ದಾಖಲೆಗಳಿಗೆ ದೂರುದಾರ ಸಹಿ ಹಾಕಿ ಬಳಿಕ ಬಿಗಿ ಭದ್ರತೆಯಲ್ಲಿ ಧರ್ಮಸ್ಥಳದಲ್ಲಿ ಬುರುಡೆ ತೆಗೆದ ಜಾಗಕ್ಕೆ ಹೋಗಿ ಮಹಜರು ನಡೆಸಲಿದ್ದಾರೆ.

ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸಿ.ಎ.ಸೈಮನ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ.ಇನ್ನು ಬೆಳ್ತಂಗಡಿ ಎಸ್.ಐ.ಟಿ ಕಚೇರಿಯ ಮುಂದೆ ಅರಣ್ಯ ಇಲಾಖೆಯ ರೇಂಜರ್ ತ್ಯಾಗರಾಜ್ ಮಹಜರಿಗೆ ತಯಾರಿ ನಡೆಸುತ್ತಿದ್ದಾರೆ. FSL ತಂಡ ಕೂಡ ಆಗಮಿಸಿದ್ದು, ಕಂದಾಯ ಇಲಾಖೆ ,ಸರ್ವೆ ಇಲಾಖೆ, ಐ.ಎಸ್.ಡಿ(ಅಂತರಿಕ ಭದ್ರತಾ ವಿಭಾಗ)ದ ಸಿಬ್ಬಂದಿ ಸ್ಥಳದಲ್ಲಿದ್ದಾರೆ.

- Advertisement -

Latest News

error: Content is protected !!