Monday, May 13, 2024
Homeತಾಜಾ ಸುದ್ದಿಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ನಿವೇಶನ, 5 ಲಕ್ಷ‌ ರೂ. ಸಾಲ ಸೌಲಭ್ಯ : ಮುಖ್ಯಮಂತ್ರಿ ಬಸವರಾಜ...

ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ನಿವೇಶನ, 5 ಲಕ್ಷ‌ ರೂ. ಸಾಲ ಸೌಲಭ್ಯ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

spot_img
- Advertisement -
- Advertisement -

ಬೆಂಗಳೂರು: ಆಸಿಡ್ ದಾಳಿಗೊಳಗಾದ ಎಲ್ಲಾ ಹೆಣ್ಣು ಮಕ್ಕಳಿಗೆ ನಿವೇಶನ ಹಾಗೂ ಮನೆ ಮನೆ ನೀಡಲು ಆದೇಶವನ್ನು ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹಲೋ ಕಂದಾಯ ಸಚಿವರೇ ಸಹಾಯವಾಣಿ ಲೋಕಾರ್ಪಣೆಗೊಳಿಸಿ ಮಾತಾನಾಡಿದ ಸಿಎಂ, ಅವರಿಗೆ ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂಪಾಯಿ ಗಳವರೆಗೆ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.

ಆಸಿಡ್ ದಾಳಿಗೆ ಒಳಗಾದವರು ಬಹಳಷ್ಟು ನೋವನ್ನು ಉಂಡಿರುತ್ತಾರೆ . ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಿರುತ್ತಾರೆ. ಅವರ ನೆರವಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಅವರ ಮಾಸಾಶನವನ್ನು 3000ದಿಂದ 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅದರ ಜೊತೆಗೆ ಈಗ ಅವರಿಗೆ ಬದುಕು ಸಾಗಿಸಲು ಮನೆ ಹಾಗೂ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ‌

- Advertisement -
spot_img

Latest News

error: Content is protected !!