Thursday, September 10, 2026
Homeಆರಾಧನಾಸಿದ್ದಗಂಗಾ ಮಠದ ಶಿವಕುಮಾರಸ್ವಾಮಿ ಪುತ್ಥಳಿ ವಿರೂಪ; ಆರೋಪಿಯ ಬಂಧನ

ಸಿದ್ದಗಂಗಾ ಮಠದ ಶಿವಕುಮಾರಸ್ವಾಮಿ ಪುತ್ಥಳಿ ವಿರೂಪ; ಆರೋಪಿಯ ಬಂಧನ

- Advertisement -
- Advertisement -

ಬೆಂಗಳೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ ಅವರ ಪುತ್ಥಳಿಯನ್ನು ಮತಾಂಧರಗೊಂಡ ವ್ಯಕ್ತಿಯೋರ್ವ ವಿರೂಪಗೊಳಿಸಿದ್ದು, ಇದೀಗ ಆರೋಪಿಯನ್ನು ಗಿರಿನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು  ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ವಾಸವಿದ್ದ ರಾಜ್ ಶಿವು ಎನ್ನಲಾಗಿದ್ದು, ಈತ ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ಶನಿವಾರ ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ. ಆರೋಪಿ ರಾಜ್ 7 ವರ್ಷಗಳ ಹಿಂದೆಯೇ ಹಿಂದೂ ಧರ್ಮ ದೊರೆದಿದ್ದು, ಹಿಂದೂ ದೇವತೆಗಳು, ಸಂತರು, ಸನ್ಯಾಸಿಗಳ ಮೇಲೆ ದ್ವೇಷ ಸಾಧಿಸುತ್ತಿದ್ದ ಎನ್ನಲಾಗಿದೆ. ಈತ ಕ್ರಿಶ್ಚಿಯನ್‌ಗೆ ಮತಾಂತರವಾದ ಮೇಲೆ ಧರ್ಮಾಂದನಂತೆ ವರ್ತಿಸುತ್ತಿದ್ದ. ಹೀಗಾಗಿ, ಶಿವಕುಮಾರ ಸ್ವಾಮೀಜಿ ಮೂರ್ತಿಯನ್ನು ಒಡೆಯಲು ಪ್ಲಾನ್ ಮಾಡಿಕೊಂಡಿದ್ದ ಎನ್ನುವ ವಿಚಾರ ಹರಿದಾಡುತ್ತಿದೆ. 

ಇನ್ನು ಈ ವಿಚಾರಕ್ಕೆ ಸ್ಪಷ್ಟನೆ ನೀಡಿರುವ ರಾಜ್, ‘ನನ್ನ ಕನಸನಲ್ಲಿ ಏಸು ಬಂದು ಶಿವಕುಮಾರ್ ಸ್ವಾಮೀಜಿ ಮೂರ್ತಿ ಒಡೆಯಲು ಹೇಳಿದ್ದಾರೆ. ಏಸು ಹೇಳಿದ್ದಕ್ಕೆ ಶಿವಕುಮಾರ್ ಸ್ವಾಮೀಜಿ ಮೂರ್ತಿ ವಿರೂಪಗೊಳಿಸಿದ್ದೇನೆ,’ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ

ಪುತ್ಥಳಿಯನ್ನು ವಿರೂಪಗೊಳಿಸುವುದಷ್ಟೇ ಅಲ್ಲದೇ ಆರೋಪಿಯು ಕ್ರೈಸ್ತ ಧರ್ಮದ ಪ್ರಚಾರ ಮಾಡಲು ಭಿತ್ತಿಪತ್ರ ಹಂಚುತ್ತಿದದ್ದು, ಭಿತ್ತಿ ಪತ್ರದಲ್ಲಿ ಬೈಬಲ್ ಓದುವಂತೆ ಕೋಡ್ ಸ್ಕ್ಯಾನ್ ಅನ್ನು ಕೂಡ ನೀಡಲಾಗಿದೆ ಎಂದು ತಿಳಿದು ಬಂದಿದೆ.   

- Advertisement -

Latest News

error: Content is protected !!