- Advertisement -
![]()
- Advertisement -
ಮಂಗಳೂರು: ಸುರತ್ಕಲ್ ನಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಹಿನ್ನಲೆಯಲ್ಲಿ ನ.15 ರ ಸೋಮವಾರದಂದು ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್, ಸುಖೇಶ್ ಎಂದು ಗುರುತಿಸಲಾಗಿದೆ.
ಅನ್ಯ ಧರ್ಮದ ಯುವತಿಯೊಂದಿಗೆ ಯುವಕನೋರ್ವ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಅರೋಪಿಗಳು ಯುವಕನನ್ನು ಥಳಿಸಿರುವ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ.
ಯುವತಿ ಅಪಾರ್ಟ್ ಮೆಂಟ್ ಖಾಲಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಲಗೇಜ್ ಶಿಫ್ಟ್ ಮಾಡಿ ಯುವಕ ಯುವತಿಯನ್ನು ಕರೆದುಕೊಂಡು ಹೋಗುತ್ತಿದ್ದ ಬೈಕ್ ಹಿಂಬಾಲಿಸಿ ಬಂದ ಯುವಕರ ತಂಡವೂ ಯುವಕನಿಗೆ ಥಳಿಸಲಾಗಿದೆ. ಈ ಹಿನ್ನಲೆಯಲ್ಲಿ ಯುವಕ ಸುರತ್ಕಲ್ ಠಾಣಾ ಪೊಲೀಸರಿಗೆ ದೂರು ನೀಡಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
- Advertisement -


