Thursday, June 4, 2026
Homeಮನರಂಜನೆಡಿ ಬಾಸ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಸೇರಿ 13 ಆರೋಪಿಗಳಿಗೆ 6...

ಡಿ ಬಾಸ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಸೇರಿ 13 ಆರೋಪಿಗಳಿಗೆ 6 ದಿನಗಳ ಪೊಲೀಸ್ ಕಸ್ಟಡಿ

- Advertisement -
- Advertisement -

ಬೆಂಗಳೂರು: ಡಿ ಬಾಸ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ ಸೇರಿ 13 ಆರೋಪಿಗಳಿಗೆ 6 ದಿನಗಳ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.

ನಟ ದರ್ಶನ್ ತೂಗುದೀಪ್ ಮತ್ತು ಪವಿತ್ರಾ ಗೌಡ ಸೇರಿದಂತೆ ಒಟ್ಟು 13 ಆರೋಪಿಗಳನ್ನು ಪೊಲೀಸರು ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಬೆಂಗಳೂರಿನ ಬೌರಿಂಗ್ ಆಸ್ಪತ್ರೆಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ನ್ಯಾಯಾಧೀಶ ವಿಶ್ವನಾಥ ಸಿ. ಗೌಡರ್ ಅವರ ಮುಂದೆ ಇಂದು ಎಲ್ಲಾ ಆರೋಪಿಗಳನ್ನು ಹಾಜರುಪಡಿಸಲಾಗಿತ್ತುಎಲ್ಲಾ ಕಡೆ ಮಹಜರು ನಡೆಸಬೇಕಾಗಿರುವ ಕಾರಣದಿಂದ ವಿಚಾರಣೆಗಾಗಿ ಹದಿನಾಲ್ಕು ದಿನಗಳ ಕಾಲ ಆರೋಪಿಗಳನ್ನು ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದರು. ಅದರಂತೆ ಕಸ್ಟಡಿಗೆ ನೀಡಲಾಗಿದೆ.

- Advertisement -

Latest News

error: Content is protected !!