Wednesday, June 24, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 6 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 6 ಹೊಸ ಕೋವಿಡ್ ಪ್ರಕರಣಗಳು ಪತ್ತೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಶೂನ್ಯಕ್ಕೆ ಇಳಿದಿದ್ದ ಕೋವಿಡ್ ಪ್ರಕರಣದಲ್ಲಿ ಇಂದು ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 6 ಹೊಸ ಪ್ರಕರಣಗಳು ಕಾಣಿಸಿಕೊಂಡಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 5 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ 14ಕ್ಕೆ ಹೆಚ್ಚಳವಾಗಿದೆ. ಉಡುಪಿ ಜಿಲ್ಲೆಯಲ್ಲಿ 1 ಸಕ್ರೀಯ ಪ್ರಕರಣ ಇದೆ. 6 ಪ್ರಕರಣಗಳ ಮೂಲಕ ಇಂದು ಕೂಡಾ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿ ಮುಂದುವರಿದಿದೆ.

ರಾಜ್ಯದಲ್ಲಿ ಇಂದು ಪತ್ತೆಯಾಗಿರುವ ಒಟ್ಟು 118 ಪ್ರಕರಣಗಳ ಪೈಕಿ 107 ಪ್ರಕರಣಗಳು ಬೆಂಗಳೂರು ನಗರದಲ್ಲಿ ಪತ್ತೆಯಾಗಿವೆ. ಇನ್ನು ಕೋಲಾರ ಜಿಲ್ಲೆಯಲ್ಲಿ 3, ಬೆಳಗಾವಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.

- Advertisement -

Latest News

error: Content is protected !!