Thursday, June 4, 2026
Homeಕರಾವಳಿಉಡುಪಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 6 ಹೊಸ ಕೊರೋನಾ ಪ್ರಕರಣಗಳು ಪತ್ತೆ: ಮತ್ತೆ ಎರಡನೇ ಸ್ಥಾನಕ್ಕೇರಿದ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 6 ಹೊಸ ಕೊರೋನಾ ಪ್ರಕರಣಗಳು ಪತ್ತೆ: ಮತ್ತೆ ಎರಡನೇ ಸ್ಥಾನಕ್ಕೇರಿದ ದಕ್ಷಿಣ ಕನ್ನಡ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 109 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಪ್ರಕರಣಗಳು ಪತ್ತೆಯಾಗಿವೆ.

ನಿನ್ನೆ ಒಂದು ಪ್ರಕರಣ ಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 6 ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 3 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಸಕ್ರೀಯ ಪ್ರಕರಣಗಳ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 1 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ ಮೂರಕ್ಕೇರಿದೆ

ಇಂದು ಪತ್ತೆಯಾಗಿರುವ ಒಟ್ಟು 109 ಪ್ರಕರಣಗಳ ಪೈಕಿ ಬೆಂಗಳೂರು ‌ನಗರದಲ್ಲಿ 95, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2, ಚಿಕ್ಕಮಗಳೂರು ಜಿಲ್ಲೆಯಲ್ಲಿ 3, ಹಾಸನ ಮತ್ತು ಉಡುಪಿ ಜಿಲ್ಲೆಗಳಲ್ಲಿ ತಲಾ ಒಂದು ಹೊಸ ಪ್ರಕರಣಗಳು ಪತ್ತೆಯಾಗಿವೆ.

- Advertisement -

Latest News

error: Content is protected !!